ನೆಹರೂ ಕುಟುಂಬದ ಬಗ್ಗೆ ಟ್ವೀಟ್ ಮಾಡಿದ್ದಕ್ಕೆ ನಟಿ ಬಂಧನ
ಜೈಪುರ, ಡಿಸೆಂಬರ್ 15: ಹಿಂದಿ ಚಿತ್ರರಂಗದ ನಟಿ, ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿದ್ದ ಪಾಯಲ್ ರೋಹ್ಟಗಿ ಅವರನ್ನು ಭಾನುವಾರದಂದು ರಾಜಸ್ಥಾನದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪಾಯಲ್ ಅವರು ಈ ಬಗ್ಗೆ ಟ್ವೀಟ್ ಮಾಡಿ ತಮ್ಮನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಬುಂದಿ ಎಸ್ಪಿ ಮಮತಾ ಗುಪ್ತಾ ಈ ಬಗ್ಗೆ ಪ್ರತಿಕ್ರಿಯಿಸಿ, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಟೀ ಪಾಯಲ್ ರೋಹಟಗಿ ಅವರನ್ನು ಅಹಮದಾಬಾದ್ನಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಮೋತಿ ಲಾಲ್ ನೆಹರೂ ಹಾಗೂ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪ ಅವರ ಮೇಲಿದೆ ಎಂದಿದ್ದಾರೆ.

2019ರ ಸೆಪ್ಟೆಂಬರ್ 21ರಂದು ಪಾಯಲ್ ರೋಹ್ಟಗಿ ಅವರು ಫೇಸ್ ಬುಕ್ ನಲ್ಲಿ ಮೋತಿಲಾಲ್ ನೆಹರೂ ಕುಟುಂಬದ ಬಗ್ಗೆ ಮಾತನಾಡಿದ ವಿಡಿಯೋ ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ ನೆಹರೂ ಕುಟುಂಬದ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿದ್ದರು ಎಂಬ ಆರೋಪವಿದೆ.
ಈ ಕುರಿತಂತೆ ಕಾಂಗ್ರೆಸ್ ಮುಖಂಡ, ಸಾಮಾಜಿಕ ಕಾರ್ಯಕರ್ತ ಚಾರ್ಮೇಶ್ ಶರ್ಮಾ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಬುಂದಿಯ ಸದರ್ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 66, 67 ನಡಿ ತನಿಖೆ ನಡೆಸಿ, ಹೆಚ್ಚಿನ ವಿಚಾರಣೆಗಾಗಿ ನಟಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
I am arrested by @PoliceRajasthan for making a video on #MotilalNehru which I made from taking information from @google 😡 Freedom of Speech is a joke 🙏 @PMOIndia @HMOIndia
— PAYAL ROHATGI & Team- Bhagwan Ram Bhakts (@Payal_Rohatgi) December 15, 2019
ಬಂಧನದ ಬಳಿಕ ಟ್ವೀಟ್ ಮಾಡಿರುವ ಪಾಯಲ್, ನಾನು ಮೋತಿಲಾಲ್ ನೆಹರೂ ವಿರುದ್ಧ ಮಾತನಾಡಿ ವಿಡಿಯೋ ಮಾಡಿದ್ದಕ್ಕೆ ನನ್ನನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಆದರೆ ವಿಡಿಯೋದ ಎಲ್ಲಾ ಮಾಹಿತಿಗಳನ್ನು ಗೂಗಲ್ನಿಂದಲೇ ಪಡೆದಿದ್ದು, ಹಾಗಾದರೆ ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಸುಮ್ಮನೆ ತಮಾಷೆಗಾಗಿ ಇದೆಯೇ ಎಂದು ಪ್ರಧಾನಮಂತ್ರಿ ಸಚಿವಾಲಯ, ಗೃಹಸಚಿವಾಲಯವನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications