ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೋಲ್ ಆಫ್ ಪೋಲ್ಸ್ : ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ

|
Google Oneindia Kannada News

ಜೈಪುರ, ಡಿಸೆಂಬರ್ 07 : ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. 199 ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ. ಚುನಾವಣೋತ್ತರ ಸಮೀಕ್ಷೆ ಇಂದು ಪ್ರಕಟವಾಗಿದೆ.

ಶುಕ್ರವಾರ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಿತು. ಮತದಾನ ಮುಕ್ತಾಯಗೊಂಡ ಬಳಿಕ ವಿವಿಧ ರಾಷ್ಟ್ರೀಯ ವಾಹಿನಿಗಳು ಚುನಾವಣೋತ್ತರ ಸಮೀಕ್ಷೆಯನ್ನು ನಡೆಸಿವೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಲಿದೆ ಎಂದು ಸಮೀಕ್ಷೆ ಹೇಳಿದೆ.

ರಾಜಸ್ಥಾನ ಚುನಾವಣೆ 2018 : ಕಾಂಗ್ರೆಸ್‌ ದೊಡ್ಡ ಪಕ್ಷವಾಗಲಿದೆ!ರಾಜಸ್ಥಾನ ಚುನಾವಣೆ 2018 : ಕಾಂಗ್ರೆಸ್‌ ದೊಡ್ಡ ಪಕ್ಷವಾಗಲಿದೆ!

ರಾಜಸ್ಥಾನ ವಿಧಾನಸಭೆಯಲ್ಲಿ ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ಸಂಖ್ಯೆ 100. ಎಲ್ಲಾ ಸಮೀಕ್ಷೆಗಳ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 108 ಸ್ಥಾನ, ಬಿಜೆಪಿ 82 ಸ್ಥಾನಗಳಲ್ಲಿ ಜಯಗಳಿಸಲಿದೆ. ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಲಿದೆ.

ರಾಜೆಯ 'ತೂಕ'ದ ಬಗ್ಗೆ ಮಾತನಾಡಿದ ಯಾದವ್ ಗೆ ತಪರಾಕಿರಾಜೆಯ 'ತೂಕ'ದ ಬಗ್ಗೆ ಮಾತನಾಡಿದ ಯಾದವ್ ಗೆ ತಪರಾಕಿ

2013ರ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ 163 ಸ್ಥಾನಗಳನ್ನು ಪಡೆದು ಅಧಿಕಾರ ಪಡೆದಿತ್ತು. ವಸುಂಧರಾ ರಾಜೆ ಅವರು ಮುಖ್ಯಮಂತ್ರಿಯಾಗಿದ್ದರು. ಕಾಂಗ್ರೆಸ್‌ 21 ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಿತ್ತು. ರಾಜಸ್ಥಾನ ವಿಧಾನಸಭೆ ಚುನಾವಣಾ ಫಲಿತಾಂಶ ಡಿಸೆಂಬರ್ 11ರ ಮಂಗಳವಾರ ಪ್ರಕಟವಾಗಲಿದೆ.

ರಾಜಸ್ಥಾನ ಚುನಾವಣೆ, ಅಂಕಿ-ಸಂಖ್ಯೆ: ಚಿತ್ರ ಮಾಹಿತಿರಾಜಸ್ಥಾನ ಚುನಾವಣೆ, ಅಂಕಿ-ಸಂಖ್ಯೆ: ಚಿತ್ರ ಮಾಹಿತಿ

ಚುನಾವಣೋತ್ತರ ಸಮೀಕ್ಷೆ

ಚುನಾವಣೋತ್ತರ ಸಮೀಕ್ಷೆ

ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ. 108 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಐದು ವರ್ಷ ಅಧಿಕಾರ ನಡೆಸಿದ ಬಿಜೆಪಿ 82 ಸ್ಥಾನಗಳನ್ನು ಪಡೆಯಲಿದೆ.

ಆಡಳಿತ ವಿರೋಧಿ ಅಲೆ

ಆಡಳಿತ ವಿರೋಧಿ ಅಲೆ

ರಾಜಸ್ಥಾನದಲ್ಲಿದ್ದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್ ಪಕ್ಷಕ್ಕೆ ಜಯ ತಂದುಕೊಡಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ನಡೆಸಿದ ಪ್ರಚಾರವೂ ಫಲಕೊಟ್ಟಿದೆ.

ಸಮೀಕ್ಷೆಗಳ ಸಮೀಕ್ಷೆ

ಸಮೀಕ್ಷೆಗಳ ಸಮೀಕ್ಷೆ

ರಾಜಸ್ಥಾನ ವಿಧಾನಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳ ಸಮೀಕ್ಷೆ ಪ್ರಕಾರ ಬಿಜೆಪಿ 76 ಸ್ಥಾನಗಳನ್ನು ಮಾತ್ರ ಪಡೆಯಲಿದೆ. ಕಾಂಗ್ರೆಸ್ 115, ಬಿಎಸ್‌ಪಿ 0, ಇತರರು 8 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ.

ಕಾಂಗ್ರೆಸ್‌ ಸಾಧನೆ ದೊಡ್ಡದು

ಕಾಂಗ್ರೆಸ್‌ ಸಾಧನೆ ದೊಡ್ಡದು

2018ರ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಎಷ್ಟು ಸ್ಥಾನಗಳನ್ನು ಗಳಿಸಿದರೂ ಕಾಂಗ್ರೆಸ್‌ ಸಾಧನೆಯೇ ಸರಿ. ಏಕೆಂದರೆ 2013ರ ಚುನಾವಣೆಯಲ್ಲಿ ಪಕ್ಷ 21 ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಿತ್ತು. ಆದರೆ, ಇಂದಿನ ಸಮೀಕ್ಷೆಗಳ ಪ್ರಕಾರ 100ಕ್ಕೂ ಅಧಿಕ ಸ್ಥಾನಗಳಲ್ಲಿ ಪಕ್ಷ ಜಯಗಳಿಸಲಿದ್ದು, ಅತಿ ದೊಡ್ಡ ಪಕ್ಷವಾಗಲಿದೆ.

ಅಧಿಕಾರ ಕಳೆದುಕೊಳ್ಳಲಿದೆ

ಅಧಿಕಾರ ಕಳೆದುಕೊಳ್ಳಲಿದೆ

ಸಮೀಕ್ಷೆಗಳ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 115, ಬಿಜೆಪಿ 76, ಇತರರು 8 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಇದರಿಂದಾಗಿ ಬಿಜೆಪಿಗೆ ಮುಖಭಂಗವಾಗಲಿದೆ. 2013ರ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳಲ್ಲಿ ಜಯಗಳಿಸಿತ್ತು.

English summary
Rajasthan assembly elections 2018. Voting held on December 7, 2018 for 199 assembly seats. Poll of polls predicted Congress win in state. Congress will get 108 and BJP to get 82 seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X