• search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾವೈರಸ್ ಸೋಂಕು ತಪಾಸಣೆಗೂ ಆಧಾರ್ ಕಾರ್ಡ್ ಕಡ್ಡಾಯ

|

ಜೈಪುರ್, ಜುಲೈ.26: ರಾಜಸ್ಥಾನದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ರಾಜಸ್ಥಾನ ಸರ್ಕಾರವು ಹೊರಡಿಸಿರುವ ಹೊಸ ಮಾರ್ಗಸೂಚಿಯಲ್ಲಿ ಕೊವಿಡ್-19 ವೈದ್ಯಕೀಯ ತಪಾಸಣೆಗೆ ಒಳಪಡುವ ಪ್ರತಿಯೊಬ್ಬರು ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

RT-PCR ತಪಾಸಣೆ ಮಾಡಿಸಿಕೊಳ್ಳುವ ಪ್ರತಿಯೊಬ್ಬರ ಮಾಹಿತಿಯನ್ನು ಸಂಗ್ರಹಿಸಿಕೊಳ್ಳಲು ಈ ನಿಯಮವನ್ನು ಜಾರಿಗೊಳಿಸಲಾಗಿದೆ. ರಕ್ತ ಮತ್ತು ಗಂಟಲು ಮಾದರಿ ಸಂಗ್ರಹಿಸಿದ ಪ್ರತಿಯೊಬ್ಬರ ಮಾಹಿತಿಯನ್ನು RT-PCR App ನಲ್ಲಿ ಅಪ್ ಲೋಡ್ ಮಾಡುವಂತೆ ಎಲ್ಲ ಪ್ರಯೋಗಾಲಯಗಳಿಗೂ ಸೂಚಿಸಲಾಗಿದೆ.

ಈ ಎರಡು ಕೊರೊನಾ ಔಷಧ ಬೇಕಾ, ಆಧಾರ್ ಕಾರ್ಡ್ ರೆಡಿ ಇರ್ಲಿ

ಒಂದು ವೇಳೆ ಆಧಾರ್ ಕಾರ್ಡ್ ಇಲ್ಲದ ಪುಟ್ಟ ಮಕ್ಕಳು ತಮ್ಮ ಪೋಷಕರ ಆಧಾರ್ ಕಾರ್ಡ್ ಮಾಹಿತಿಯನ್ನು ನೀಡುವುದು ಕಡ್ಡಾಯಗೊಳಿಸಲಾಗಿದೆ. ಇನ್ನು, ಕೊವಿಡ್-19 ತಪಾಸಣೆ ನಡೆಸಿದ 24 ಗಂಟೆಗಳಲ್ಲೇ ವರದಿ ನೀಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.

ಹೋಮ್ ಐಸೋಲೇಷನ್ ನಲ್ಲಿ ಇರುವವರಿಗೆ ಮಾತ್ರೆ:

ರಾಜಸ್ಥಾನದಲ್ಲಿ ಕೊರೊನಾವೈರಸ್ ಸೋಂಕಿತರ ಆರೈಕೆ ಮಾಡುವ ಸಂಬಂಧಿಕರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಸರ್ಕಾರದಿಂದಲೇ ಹೈಡ್ರೋಕ್ಸಿಕ್ಲೋರಿಕ್ಯೂನ್ ಮತ್ತು ಪ್ರೊಫಿಲಾಕ್ಸಿಸ್ ಮಾತ್ರೆಗಳನ್ನು ವಿತರಿಸಲಾಗುತ್ತಿದೆ. ಪ್ರತಿನಿತ್ಯ ಕನಿಷ್ಠ 40,000 ಜನರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ರಾಜ್ಯದಲ್ಲಿ ಇದುವರೆಗೂ 34178 ಮಂದಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿದೆ. ಈ ಪೈಕಿ 24547 ಮಂದಿ ಗುಣಮುಖರಾಗಿದ್ದು, 9029 ಸಕ್ರಿಯ ಪ್ರಕರಣಗಳಿವೆ. ಮಹಾಮಾರಿಗೆ ಇದುವರೆಗೂ 602 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Rajasthan: Aadhaar Card Mandatory For Covid-19 Testing In State.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X