• search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜಸ್ಥಾನ: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

|

ಜೈಪುರ, ನವೆಂಬರ್ 15: ಇದೇ ಡಿಸೆಂಬರ್ ನಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಒಟ್ಟು 31 ಅಭ್ಯರ್ಥಿಗಳ ಎರಡನೇ ಪಟ್ಟಿ ನಿನ್ನೆ ಬಿಡುಗಡೆಯಾಗಿದ್ದು, ಅದಕ್ಕೂ ಹಲವು ದಿನ ಮೊದಲೇ 131 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು.

ರಾಜಸ್ಥಾನದಲ್ಲಿ ಬಿಜೆಪಿಗೆ ಬಿಗ್ ಶಾಕ್, ಕಾಂಗ್ರೆಸ್ ಸೇರಿದ ಬಿಜೆಪಿ ಸಂಸದ!

200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ.

ಚುನಾವಣಾ ಹೊಸ್ತಿಲಲ್ಲಿ ಅಮಿತ್ ಶಾ- ವಸುಂಧರಾ ರಾಜೆ ಭೀಕರ ಮನಸ್ತಾಪ

ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರ ಈ ಬಾರಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, ಬಹುಮತ ಪಡೆಯುವುದು ಕಷ್ಟ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದರೆ ಕೊನೆಯ ಕ್ಷಣಗಳಲ್ಲಿ ಮೋದಿ ಅಲೆ ಕೆಲಸ ಮಾಡಿದರೆ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಕನಸು ನುಚ್ಚು ನೂರಾದರೂ ಅಚ್ಚರಿಯಿಲ್ಲ. ಆದರೆ ಬಿಜೆಪಿ ವಿರುದ್ಧದ ಆಡಳಿತ ವಿರೋಧಿ ಅಲೆಯನ್ನು ಸರಯಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದು, ಈಗಾಗಲೇ ದಿನೇ ದಿನೇ rally ಗಳು ನಡೆಯುತ್ತಿವೆ.

English summary
The Bharatiya Janata Party (BJP) announced the second list of candidates for 31 Assembly constituencies on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X