ರಾಜಸ್ಥಾನದಲ್ಲಿ ಕಾಂಗ್ರೆಸ್‌ ನಾಗಲೋಟ, ಬಿಜೆಪಿಗೆ ಹಿನ್ನಡೆ

Recommended Video

      5 States Election Results 2018: ರಾಜಸ್ಥಾನದಲ್ಲಿ ಕಾಂಗ್ರೆಸ್‌ ನಾಗಲೋಟ, ಬಿಜೆಪಿಗೆ ಹಿನ್ನಡೆ | Oneindia Kannada

      ಜೈಪುರ, ಡಿಸೆಂಬರ್ 11 : ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ನಿಜವಾಗುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಭಾರಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದೆ.

      ರಾಜಸ್ಥಾನದ 199 ಕ್ಷೇತ್ರಗಳ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. 8.45ರ ಹೊತ್ತಿಗೆ ಕಾಂಗ್ರೆಸ್ 43, ಬಿಜೆಪಿ 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಚುನಾವಣೋತ್ತರ ಸಮೀಕ್ಷೆ ರಾಜ್ಯದಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಲಿದೆ ಎಂದು ಹೇಳಿವೆ.

      2013ರ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿತ್ತು. 5 ವರ್ಷ ಅಧಿಕಾರ ನಡೆಸಿದರೂ ಬಿಜೆಪಿ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದೆ.

      Rajasthan assembly elections 2018 : Congress Leads

      ಹಾಲಿ ಮುಖ್ಯಮಂತ್ರಿ ಬಿಜೆಪಿಯ ವಸುಂಧರಾ ರಾಜೆ ಅವರು ಜಲ್‌ರಾಪಟನ್ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದು ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಆದರೆ, ರಾಜ್ಯದಲ್ಲಿ ಬಿಜೆಪಿಯ ಅಭ್ಯರ್ಥಿಗಳು ಹಿನ್ನಡೆ ಕಂಡಿದ್ದಾರೆ.

      ರಾಜಸ್ಥಾನದಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. 2 ಬಾರಿ ಮುಖ್ಯಮಂತ್ರಿ ಆಗಿರುವ ಅಶೋಕ್ ಗೆಹ್ಲೋಟ್ ಅವರು ಸರ್ದಾರ್ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

      ಸಚಿನ್ ಪೈಲೆಟ್ ಅವರು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಈಗಾಗಲೇ ಟೋಂಕ್ ಕ್ಷೇತ್ರದಲ್ಲಿ ಅವರು ಮುನ್ನಡೆ ಸಾಧಿಸಿದ್ದಾರೆ. ರಾಜಸ್ಥಾನದಲ್ಲಿ 199 ಸ್ಥಾನಗಳಿದ್ದು, ಬಹುಮತ ಪಡೆಯಲು 100 ಸ್ಥಾನಗಳಲ್ಲಿ ಜಯಗಳಿಸಬೇಕಿದೆ.

      ಪ್ರತಿ 5 ವರ್ಷಕ್ಕೊಮ್ಮೆ ರಾಜಸ್ತಾನದಲ್ಲಿ ಸರ್ಕಾರ ಬದಲಾಗುತ್ತದೆ. ಒಮ್ಮೆ ಆಯ್ಕೆಯಾದ ಪಕ್ಷ ಮತ್ತೊಮ್ಮೆ ಚುನಾವಣೆಯಲ್ಲಿ ಸೋಲು ಅನುಭವಿಸುತ್ತದೆ. ಈ ಬಾರಿ ಏನಾಗಲಿದೆ? ಎಂದು ಕಾದು ನೋಡಬೇಕು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+