ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ವಸುಂಧರಾ ರಾಜೆ ರಾಜೀನಾಮೆ
Recommended Video

ಜೈಪುರ, ಡಿಸೆಂಬರ್ 12: ಮಂಗಳವಾರ ಹೊರಬಿದ್ದ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ಸೋಲನುಭವಿಸಿದ ಬಳಿಕ, ಸೋಲೊಪ್ಪಿಕೊಂಡಿರುವ ಮುಖ್ಯಮಂತ್ರಿ ವಸುಂಧರಾ ರಾಜೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜಕೀಯದಲ್ಲಿ ಸೋಲು-ಗೆಲುವು ಸಹಜ. ನಾವು ಸೋಲನ್ನು ಸ್ವೀಕರಿಸುತ್ತೇವೆ ಎಂದು ರಾಜೆ ಹೇಳಿದರು.

ರಾಜಸ್ಥಾನದಲ್ಲಿ 200 ರಲ್ಲಿ 99 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಆಡಳಿತಾರೂಢ ಬಿಜೆಪಿ ಕೇವಲ 73 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈಗಾಗಲೇ ಕಾಂಗ್ರೆಸ್ಸಿಗೆ ಬಿಎಸ್ಪಿಯ ಬೆಂಬಲ ದೊರಕಿದ್ದು, ಪಕ್ಷೇತರರನ್ನೂ ಸೆಳೆಯುವ ಕೆಲಸ ನಡೆಯುತ್ತಿದೆ. ಪಟ್ಟಿನಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಈ ಮೂಲಕ ಐದು ವರ್ಷಗಳ ನಂತರ ರಾಜಸ್ಥಾನವನ್ನು ಬಿಜೆಪಿ ಕಾಂಗ್ರೆಸ್ಸಿಗೆ ಬಿಟ್ಟುಕೊಟ್ಟಿದೆ.
ಬಿಜೆಪಿ ವಿರುದ್ಧ ಇದ್ದ ಆಡಳಿತ ವಿರೋಧಿ ಅಲೆಯೇ ರಾಜಸ್ಥಾನದ ಸೋಲಿಗೆ ಮುಖ್ಯ ಕಾರಣ ಎನ್ನಲಾಗಿದೆ. ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯವಿದ್ದಿದ್ದರಿಂದ ಪಕ್ಷದೊಳಗೇ ಒಡಕಿದ್ದಿದ್ದು ಸೋಲಿಗೆ ಮತ್ತೊಂದು ಕಾರಣವಾಗಿತ್ತು.












Click it and Unblock the Notifications