ರಾಜಸ್ಥಾನ ಚುನಾವಣೆ: ಹೃದಯಾಘಾತದಿಂದ ಬಿಎಸ್ಪಿ ಅಭ್ಯರ್ಥಿ ಸಾವು
ಜೈಪುರ, ನವೆಂಬರ್ 29: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಅಭ್ಯರ್ಥಿ ಲಕ್ಷ್ಮಣ್ ಸಿಂಗ್ ಅವರು ಗುರುವಾರ ಬೆಳಗ್ಗಿನ ಜಾವ ಹೃದಯಾಘಾತದಿಂದ ಮೃತರಾಗಿದ್ದಾರೆ.
ರಾಜಸ್ಥಾನದ ಆಲ್ವಾರ್ ಜಿಲ್ಲೆಯ ರಾಮಗರ್ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿಯಾಗಿ ಅವರು ಕಣದಲ್ಲಿದ್ದರು.
ಲಕ್ಷ್ಮಣ್ ಸಿಂಗ್ ಅವರ ನಿಧನದಿಂದಾಗಿ ರಾಮಗರ್ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದ್ದು, ಡಿಸೆಂಬರ್ 07 ರಂದು 199(200) ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ.

ಕಳೆದ ಮೇ ತಿಂಗಳಿನಲ್ಲಿ ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ ಎನ್ ವಿಜಯ ಕುಮಾರ್ ಅವರು ಹೃದಯಾಘಾತದಿಂದ ನಿಧನರಾದ ಕಾರಣ ಆ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿತ್ತು. ಅಂತೆಯೇ ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದು ನ್ಯಾಮಗೌಡ ಅವರು ಅಪಘಾತದಲ್ಲಿ ಮೃತರಾದ ಕಾರಣ ಆ ಕ್ಷೇತ್ರದ ಚುನಾವಣೆಯನ್ನು ನಂತರ ನಡೆಸಲಾಗಿತ್ತು.












Click it and Unblock the Notifications