ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2 ದಿನದಲ್ಲೇ ಲಸಿಕೆ ಖಾಲಿ; 30 ಲಕ್ಷ ಲಸಿಕೆ ಕೊಡಿ ಎಂದ ಮುಖ್ಯಮಂತ್ರಿ!

|
Google Oneindia Kannada News

ಜೈಪುರ್, ಏಪ್ರಿಲ್ 09: ರಾಜಸ್ಥಾನದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗವನ್ನು ಮತ್ತಷ್ಟು ಹೆಚ್ಚಿಸಬೇಕಿದೆ. ಸದ್ಯ ರಾಜ್ಯದಲ್ಲಿ ಇರುವ ಲಸಿಕೆಯು ಎರಡು ದಿನಗಳಲ್ಲಿ ಖಾಲಿ ಆಗಲಿದ್ದು, ತುರ್ತಾಗಿ ಕನಿಷ್ಠ 30 ಲಕ್ಷ ಡೋಸ್ ಕೊವಿಡ್-19 ಲಸಿಕೆಯನ್ನು ರವಾನಿಸಬೇಕೆಂದು ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪತ್ರ ಬರೆದಿದ್ದಾರೆ.

ಗುರುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಸಂವಾದದಲ್ಲಿ ಅಶೋಕ್ ಗೆಹ್ಲೋಟ್ ಅವರು ಲಸಿಕೆ ವಿತರಣೆ ಬಗ್ಗೆ ಮಾಹಿತಿ ನೀಡಿದ್ದರು. ರಾಜ್ಯದಲ್ಲಿ ಪ್ರತಿನಿತ್ಯ 5 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದರು.

ಲಸಿಕೆ ಅಭಾವ: ಮೋದಿಗೆ ಪ್ರಚಾರದ ಹುಚ್ಚು ಎಂದು ಕಾಂಗ್ರೆಸ್ ಸುಳ್ಳು ಮಾಹಿತಿ ನೀಡಿತೇ?ಲಸಿಕೆ ಅಭಾವ: ಮೋದಿಗೆ ಪ್ರಚಾರದ ಹುಚ್ಚು ಎಂದು ಕಾಂಗ್ರೆಸ್ ಸುಳ್ಳು ಮಾಹಿತಿ ನೀಡಿತೇ?

ರಾಜಸ್ಥಾನದಲ್ಲಿ ಜನವರಿ 16ರಿಂದ ಏಪ್ರಿಲ್ 7ರವರೆಗೆ 86,89,770 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಒಂದು ದಿನದಲ್ಲಿ 5 ಲಕ್ಷಕ್ಕಿಂತ ಹೆಚ್ಚು ಜನರಿಗೆ ಲಸಿಕೆಯನ್ನು ನೀಡುವುದಕ್ಕಾಗಿ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

Rajasthan CM Ashok Gehlot Requested For 30 Lakhs Coronavirus Vaccine To PM Narendra Modi

ಸಾಧ್ಯವಾದಷ್ಟು ಬೇಗ ಲಸಿಕೆ ಕಳುಹಿಸಲು ಮನವಿ:

ರಾಜಸ್ಥಾನದಲ್ಲಿ ಪ್ರಸ್ತುತ ಸಂಗ್ರಹಿಸಲಾಗಿರುವ ಕೊರೊನಾವೈರಸ್ ಲಸಿಕೆಯು ಎರಡು ದಿನಗಳಿಗೆ ಸಾಕಾಗುತ್ತದೆ. ಈ ಹಿನ್ನೆಲೆ 30 ಲಕ್ಷ ಡೋಸ್ ಕೊವಿಡ್-19 ಲಸಿಕೆಯನ್ನು ಕಳುಹಿಸುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಒಂದೇ ದಿನ 3970 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 354287ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ರಾಜ್ಯದಲ್ಲಿ 2898 ಜನರು ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
Rajasthan CM Ashok Gehlot Requested For 30 Lakhs Coronavirus Vaccine To PM Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X