• search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಕೊರೊನಾ ಪಾಸಿಟಿವ್

|
Google Oneindia Kannada News

ಜೈಪುರ್, ಏಪ್ರಿಲ್ 21: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಸೋಂಕಿನ ಯಾವುದೇ ಲಕ್ಷಣಗಳು ಗೋಚರಿಸಿಲ್ಲ ಎಂದು ತಿಳಿದು ಬಂದಿದೆ.

ಬುಧವಾರವಷ್ಟೇ ಸಿಎಂ ಅಶೋಕ್ ಗೆಹ್ಲೋಟ್ ಅವರ ಪತ್ನಿ ಸುನೀತಾ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಸ್ವಯಂಪ್ರೇರಿತರಾಗಿ ಗೃಹ ದಿಗ್ಬಂಧನಕ್ಕೆ ಒಳಗಾದ ಸಿಎಂ ಗೆಹ್ಲೋಟ್ ಅವರಲ್ಲೂ ಸೋಂಕು ಪತ್ತೆಯಾಗಿದೆ.

ರಾಜಸ್ಥಾನದಲ್ಲಿ ಕೊರೊನಾ ನಿಯಂತ್ರಣಕ್ಕೆ ಹೊಸ ಅಭಿಯಾನರಾಜಸ್ಥಾನದಲ್ಲಿ ಕೊರೊನಾ ನಿಯಂತ್ರಣಕ್ಕೆ ಹೊಸ ಅಭಿಯಾನ

"ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ನನ್ನಲ್ಲಿ ಸೋಂಕಿನ ಯಾವುದೇ ಲಕ್ಷಣ ಕಂಡು ಬಂದಿಲ್ಲ ಹಾಗೂ ಆರೋಗ್ಯದ ಸ್ಥಿತಿ ಉತ್ತಮವಾಗಿದೆ. ನಾನು ಪ್ರತ್ಯೇಕವಾಗಿ ಕೆಲಸ ನಿರ್ವಹಿಸುತ್ತಿದ್ದು, ಐಸೋಲೇಟ್ ಆಗಿದ್ದನೆ" ಎಂದು ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ರಾಜಸ್ಥಾನದಲ್ಲಿ ಕೊರೊನಾವೈರಸ್ ಪ್ರಕರಣ:

ರಾಜ್ಯದಲ್ಲಿ ಒಂದೇ ದಿನ 16613 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 5,63,577ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 120 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ 3926 ಜನರು ಸೋಂಕಿನಿಂದ ಪ್ರಾಣ ಬಿಟ್ಟಿದ್ದು, 1,63,372 ಸಕ್ರಿಯ ಪ್ರಕರಣಗಳಿವೆ.

English summary
Rajasthan CM Ashok Gehlot Tests Positive For Coronavirus, Tweets He Has No Symptoms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X