• search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜಸ್ಥಾನ ಚುನಾವಣೆ: ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ರಾಜೆ

|

ಜೈಪುರ, ನವೆಂಬರ್ 17: ಡಿಸೆಂಬರ್ ನಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಇಂದು(ನವೆಂಬರ್ 17) ನಾಮಪತ್ರ ಸಲ್ಲಿಸಿದರು.

ರಾಜಸ್ಥಾನದಲ್ಲಿ ಬಿಜೆಪಿಯನ್ನು ಹಣಿದುಹಾಕಲು ಕಾಂಗ್ರೆಸ್ಸಿಗೆ ಹೊಸ ಅಸ್ತ್ರ

ರಾಜಸ್ಥಾನದ ಪ್ರಮುಖ ಕ್ಷೇತ್ರಗಳಲ್ಲೊಂದಾದ ಝಲ್ರಾಪಠಾಣ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ರಾಜೆ ಕಣಕ್ಕಿಳಿದಿದ್ದಾರೆ.

ಕಾಂಗ್ರೆಸ್ ದೌರ್ಬಲ್ಯದ ಲಾಭ ಪಡೆಯಲು ಹೊಂಚು ಹಾಕಿದ ಬಿಜೆಪಿ

ಓಟ್ಟು 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ. ರಾಜಸ್ಥಾನದೊಟ್ಟಿಗೆ ಮಧ್ಯಪ್ರದೇಶ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ರಾಹ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶವೂ ಅಂದೇ ಹೊರಬೀಳಲಿದೆ.

ಕಾಂಗ್ರೆಸ್ ಗುರುವಾರವಷ್ಟೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 152 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆಗೊಳಿಸಿದ್ದು, ಈ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲೆಟ್ ಅವರುಗಳ ಹೆಸರೂ ಇದೆ.

English summary
Rajasthan Chief Minister Vasundhara Raje files her nomination for the upcoming Assembly Elections at Jhalawar secretariat
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X