ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನ ಬಿಕ್ಕಟ್ಟು; ಹೈಕೋರ್ಟ್ ಮೊರೆ ಹೋದ ಸಚಿನ್ ಪೈಲೆಟ್

|
Google Oneindia Kannada News

ಜೈಪುರ, ಜುಲೈ 16 : ರಾಜಸ್ಥಾನದ ಕಾಂಗ್ರೆಸ್ ಬಿಕ್ಕಟ್ಟು ನ್ಯಾಯಾಲಯದ ಮೆಟ್ಟಿಲೇರಿದೆ. ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಸಚಿನ್ ಪೈಲೆಟ್ ಮತ್ತು ಇತರ 18 ಶಾಸಕರು ರಾಜಸ್ಥಾನ ಹೈಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ.

Recommended Video

Oxford Covid Vaccine ಮಾನವ ಪ್ರಯೋಗದ ಪಲಿತಾಂಶ ಇಂದು | Oneindia Kannada

ಗುರುವಾರ ಸಚಿನ್ ಪೈಲೆಟ್ ಮತ್ತು ಇತರ ಶಾಸಕರು ರಾಜಸ್ಥಾನ ಹೈಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಅರ್ಜಿದಾರರಿಗೆ ಕಾಲಾವಕಾಶ ನೀಡಲಾಗಿದ್ದು, ವಿಚಾರಣೆ ಮುಂದೂಡಲಾಗಿದೆ.

''ನಾನು ಬಿಜೆಪಿ ಸೇರಲ್ಲ'' ಎಂದ ಸಚಿನ್ ಪೈಲಟ್, ಮುಂದೇನು? ''ನಾನು ಬಿಜೆಪಿ ಸೇರಲ್ಲ'' ಎಂದ ಸಚಿನ್ ಪೈಲಟ್, ಮುಂದೇನು?

ಸಚಿನ್ ಪೈಲೆಟ್ ಮತ್ತು ಇತರ 18 ಶಾಸಕರು ಜುಲೈ 14ರಂದು ರಾಜಸ್ಥಾನ ವಿಧಾನಸಭೆ ಸ್ಪೀಕರ್ ನೀಡಿರುವ ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ಶೋಕಾಸ್ ನೋಟಿಸ್ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಸಚಿನ್ ಪೈಲಟ್ ಹೊಗಳಿದ್ದಕ್ಕೆ ಕಾಂಗ್ರೆಸ್ ಪಕ್ಷದಿಂದ ಸಂಜಯ್ ವಜಾ? ಸಚಿನ್ ಪೈಲಟ್ ಹೊಗಳಿದ್ದಕ್ಕೆ ಕಾಂಗ್ರೆಸ್ ಪಕ್ಷದಿಂದ ಸಂಜಯ್ ವಜಾ?

Rajasthan Congress Crisis Sachin Pilot Moves High Court

ರಾಜಸ್ಥಾನ ವಿಧಾನಸಭೆ ಸ್ಪೀಕರ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯದಲ್ಲಿ ಹಾಜರಿದ್ದರು. ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತರಕರ ಪರವಾಗಿ ಮಹೇಶ್ ಜೋಶಿ ವಾದ ಮಂಡನೆ ಮಾಡಿದರು.

ಸಚಿನ್ ಪೈಲೆಟ್ ಬೆಂಬಲಿಗರ ರಾಜೀನಾಮೆ ಪರ್ವ ಆರಂಭ! ಸಚಿನ್ ಪೈಲೆಟ್ ಬೆಂಬಲಿಗರ ರಾಜೀನಾಮೆ ಪರ್ವ ಆರಂಭ!

ಇಂದು ಅರ್ಜಿಯ ವಿಚಾರಣೆ ಸಮಯದಲ್ಲಿ ಎಲ್ಲಾ ಅರ್ಜಿದಾರರು ನ್ಯಾಯಾಲಯಕ್ಕೆ ಅರ್ಜಿಯಲ್ಲಿ ಕೆಲವು ಬದಲಾವಣೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ನ್ಯಾಯಾಲಯ ಇದಕ್ಕೆ ಅವಕಾಶವನ್ನು ನೀಡಿದೆ.

ಸಚಿನ್ ಪೈಲೆಟ್ ಸೇರಿದಂತೆ ಎಲ್ಲಾ ಶಾಸಕರು ಬದಲಾವಣೆ ಮಾಡಿದ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ ಬಳಿಕ ಮುಂದಿನ ವಿಚಾರಣೆಯ ದಿನಾಂಕ ನಿಗದಿಯಾಗಲಿದೆ.

ವಿಧಾನಸಭೆಯ ಸ್ಪೀಕರ್ ಒತ್ತಡದ ಹಿನ್ನಲೆಯಲ್ಲಿ ಅನರ್ಹತೆಯ ನೋಟಿಸ್ ಕಳಿಸಿದ್ದಾರೆ ಎಂದು ಎಲ್ಲಾ ಶಾಸಕರು ಅರ್ಜಿಯಲ್ಲಿ ಹೇಳಿದ್ದಾರೆ. ಶಾಸಕರ ಪರವಾಗಿ ಹರೀಶ್ ಸಾಳ್ವೆ ಮತ್ತು ಮುಕುಲ್ ರೋಹ್ಟಗಿ ವಾದವನ್ನು ಮಂಡಿಸಲಿದ್ದಾರೆ.

English summary
Sachin Pilot and 18 other Congress MLAs approached Rajasthan high court over disqualification notice from assembly speaker. MLA's seeks quashing and setting aside of the show cause notice issued on 14th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X