• search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜಸ್ಥಾನ: ಕಾಂಗ್ರೆಸ್ ಶಾಸಕ ಸಚಿನ್ ಪೈಲಟ್ ರಿಗೆ ಕೊರೊನಾವೈರಸ್

|

ಜೈಪುರ್, ನವೆಂಬರ್.12: ರಾಜಸ್ಥಾನದಲ್ಲಿ ಕೊರೊನಾವೈರಸ್ ಸೋಂಕಿನ ಸಂಖ್ಯೆ ಏರುಮುಖವಾಗಿ ಸಾಗುತ್ತಿದೆ. ರಾಜ್ಯದ ಮಾಜಿ ಸಚಿವ ಹಾಗೂ ಟೊಂಕ್ ವಿಧಾನಸಭಾ ಕ್ಷೇತ್ರದ ಶಾಸಕ ಸಚಿನ್ ಪೈಲಟ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ತಮಗೆ ಕೊವಿಡ್-19 ಸೋಂಕು ತಗುಲಿರುವ ಬಗ್ಗೆ ಸ್ವತಃ ಸಚಿನ್ ಪೈಲಟ್ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ. "ನನಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲ ಕಾರ್ಯಕರ್ತರು ಮತ್ತು ಸಂಪರ್ಕಿತರು ಮುನ್ನೆಚ್ಚರಿಕೆ ಕ್ರಮವಾಗಿ ಒಮ್ಮೆ ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಿ" ಎಂದು ಮನವಿ ಮಾಡಿಕೊಂಡಿದ್ದಾರೆ.

Live: ಕರ್ನಾಟಕದಲ್ಲಿ ಒಂದೇ ದಿನ 2116 ಜನರಿಗೆ ಕೊರೊನಾವೈರಸ್ ಸೋಂಕು

"ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವ ಹಿನ್ನೆಲೆ ವೈದ್ಯರ ಮೂಲಕ ಸೂಕ್ತ ಸಲಹೆಗಳನ್ನು ತೆಗೆದುಕೊಂಡಿದ್ದೇನೆ. ಆದಷ್ಟು ಶೀಘ್ರದಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿದೆ" ಎಂದು ಸಚಿನ್ ಪೈಲಟ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ರಾಜಸ್ಥಾನದಲ್ಲಿ ಕೊರೊನಾವೈರಸ್ ಸೋಂಕು:

ರಾಜಸ್ಥಾನದಲ್ಲಿ ಒಂದೇ ದಿನ 2176 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 2,19,327ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 18 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 2032ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 1804 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ ರಾಜ್ಯದಲ್ಲಿ 1,99,943 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

English summary
Rajasthan Congress Leader Sachin Pilot Tests Positive For Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X