ರಾಜಸ್ಥಾನ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
Recommended Video

ಜೈಪುರ, ನವೆಂಬರ್ 17: ಡಿಸೆಂಬರ್ ನಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ತನ್ನ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿದೆ.
200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ 32 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
ಇದಕ್ಕೂ ಮುನ್ನ, ಗುರುವಾರ ರಾತ್ರಿ 152 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲೆಟ್ ಅವರ ಹೆಸರೂ ಇತ್ತು.

ಇದೀಗ ಎರಡನೇ ಪಟ್ಟಿಯಲ್ಲಿ ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಖ್ಯಾತ ನಾಯಕ ಮನ್ವೇಂದ್ರ ಸಿಂಗ್ ಅವರನ್ನು ಝಲ್ರಾಪಠಾಣ್ ಕ್ಷೇತ್ರದಿಂದ ಕಣಕ್ಕಿಳಿಸಲಾಗುತ್ತದೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ವಸುಂಧರಾ ರಾಜೆ ಕಣದಲ್ಲಿರುವುದು ವಿಶೇಷ.
ರಾಜಸ್ಥಾನದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಪಕ್ಷವೊಂದು ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 101. ಪ್ರಸ್ತುತ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ.












Click it and Unblock the Notifications