ರಾಜಸ್ಥಾನ ಬಿಕ್ಕಟ್ಟು; ಇಬ್ಬರು ಕಾಂಗ್ರೆಸ್ ಶಾಸಕರು ಅಮಾನತು
ಜೈಪುರ, ಜುಲೈ 17 : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಸಂಚು ರೂಪಿಸಿದ ಆರೋಪ ಮೇಲೆ ಇಬ್ಬರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.
Recommended Video
ರಾಜ್ಯದ ಕಾಂಗ್ರೆಸ್ ಘಟಕ ಇಬ್ಬರು ಶಾಸಕರನ್ನು ಅಮಾನತುಗೊಳಿಸಿದೆ. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶಿಖಾವತ್ ಪಕ್ಷದ ಶಾಸಕರಿಗೆ ಆಮಿಷವೊಡ್ಡಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಬೇಕು ಎಂದು ಒತ್ತಾಯಿಸಿದೆ.
ಶಾಸಕರಾದ ಬಿಸ್ವೇಂದ್ರ ಸಿಂಗ್ ಮತ್ತು ಬನ್ವಾರ್‌ಲಾಲ್ ಶರ್ಮಾರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಇಬ್ಬರು ಶಾಸಕರ ದೂರವಾಣಿ ಕರೆಗಳ ಆಡಿಯೋ ಕ್ಲಿಪ್ ವೈರಲ್ ಆಗಿತ್ತು. ಇದರ ಆಧಾರದ ಮೇಲೆಯೇ ಅಮಾನತು ಮಾಡಲಾಗಿದೆ.

ರಾಜಸ್ಥಾನ ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ಮಾಧ್ಯಮಗಳ ಜೊತೆ ಮಾತನಾಡಿದ್ದು, "ಶಾಸಕರನ್ನು ಖರೀದಿ ಮಾಡಲು ಪ್ರಯತ್ನ ನಡೆಸಿದ ಆರೋಪದ ಬಗ್ಗೆ ವಿಶೇಷ ತನಿಖಾ ದಳ ತನಿಖೆ ನಡೆಸಬೇಕು. ನಾನು ದೂರು ನೀಡಲಿದ್ದೇನೆ" ಎಂದು ಹೇಳಿದರು.
ಸಚಿನ್ ಪೈಲೆಟ್ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವಿನ ಅಸಮಾಧಾನದ ಕಾರಣ ರಾಜ್ಯ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಉಂಟಾಗಿದೆ. ಉಪ ಮುಖ್ಯಮಂತ್ರಿಯಾಗಿದ್ದ ಸಚಿನ್ ಪೈಲೆಟ್ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು.
ಸಚಿನ್ ಪೈಲೆಟ್ ಬೆಂಬಲಕ್ಕೆ ನಿಂತು, ದೆಹಲಿಗೆ ತೆರಳಿದ್ದ 17 ಶಾಸಕರನ್ನು ಅನರ್ಹಗೊಳಿಸಲು ವಿಧಾನಸಭೆ ಸ್ಪೀಕರ್ ನೋಟಿಸ್ ನೀಡಿದ್ದಾರೆ. ಮಂಗಳವಾರದ ತನಕ ಈ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ.












Click it and Unblock the Notifications