• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನ ಕಾಂಗ್ರೆಸ್‌ ಕೈಗೆ : ಸಮೀಕ್ಷೆಗಳ ಫಲಿತಾಂಶ ನಿಜವಾಯ್ತು!

|
Google Oneindia Kannada News

ಜೈಪುರ, ಡಿಸೆಂಬರ್ 11 : ರಾಜಸ್ಥಾನ ವಿಧಾನಸಭೆ ಚುನಾವಣೆ 2018ರ ಫಲಿತಾಂಶ ಪ್ರಕಟವಾಗಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದಂತೆ ಕಾಂಗ್ರೆಸ್‌ ದೊಡ್ಡ ಪಕ್ಷವಾಗಿದೆ. ಆಡಳಿತಾರೂಢ ಬಿಜೆಪಿ ಸೋಲು ಕಂಡಿದೆ.

ರಾಜಸ್ಥಾನದ 199 ಕ್ಷೇತ್ರಗಳಿಗೆ ಡಿಸೆಂಬರ್ 7ರಂದು ಚುನಾವಣೆ ನಡೆದಿತ್ತು. ಮಂಗಳವಾರ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ 95 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಪೋಲ್ ಆಫ್ ಪೋಲ್ಸ್ : ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆಪೋಲ್ ಆಫ್ ಪೋಲ್ಸ್ : ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ

ರಾಜಸ್ಥಾನ ವಿಧಾನಸಭೆಯಲ್ಲಿ ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 100. ಬಿಜೆಪಿ 81, ಬಿಎಸ್‌ಪಿ 3 ಇತರರು 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದು ಖಚಿತವಾಗಿದ್ದು, ಮುಖ್ಯಮಂತ್ರಿ ಯಾರು? ಎನ್ನುವ ಚರ್ಚೆ ಆರಂಭವಾಗಿದೆ.

ರಾಜಸ್ಥಾನ ಚುನಾವಣೆ 2018 : ಕಾಂಗ್ರೆಸ್‌ ದೊಡ್ಡ ಪಕ್ಷವಾಗಲಿದೆರಾಜಸ್ಥಾನ ಚುನಾವಣೆ 2018 : ಕಾಂಗ್ರೆಸ್‌ ದೊಡ್ಡ ಪಕ್ಷವಾಗಲಿದೆ

2013ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 163 ಸ್ಥಾನಗಳಲ್ಲಿ ಜಯಗಳಿಸಿ ಅಧಿಕಾರ ಹಿಡಿದಿತ್ತು. 2018ರ ಚುನಾವಣೆಯಲ್ಲಿ ಪಕ್ಷ 100ರ ಗಡಿ ದಾಟಲು ವಿಫಲವಾಗಿದೆ. ರಾಜ್ಯದಲ್ಲಿದ್ದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್ ಪಕ್ಷಕ್ಕೆ ಸಹಾಯಕವಾಗಿದೆ....

ಜಾತಿ, ಜಾತಿ, ಜಾತಿ... ರಾಜಸ್ಥಾನ ರಾಜಕೀಯದ ಮೂಲಮಂತ್ರ!ಜಾತಿ, ಜಾತಿ, ಜಾತಿ... ರಾಜಸ್ಥಾನ ರಾಜಕೀಯದ ಮೂಲಮಂತ್ರ!

ಚುನಾವಣಾ ಫಲಿತಾಂಶ 2018

ಚುನಾವಣಾ ಫಲಿತಾಂಶ 2018

2018ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಕಾಂಗ್ರೆಸ್‌ 95, ಬಿಜೆಪಿ 81, ಬಿಎಸ್‌ಪಿ 3 ಮುತ್ತು ಇತರರು 20 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶವೂ ಕಾಂಗ್ರೆಸ್ ದೊಡ್ಡ ಪಕ್ಷವಾಗಲಿದೆ ಎಂದು ಹೇಳಿತ್ತು.

ಸಮೀಕ್ಷೆಗಳ ಸಮೀಕ್ಷೆ

ಸಮೀಕ್ಷೆಗಳ ಸಮೀಕ್ಷೆ

ಡಿಸೆಂಬರ್ 7ರಂದು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮತದಾನ ನಡೆದಿತ್ತು. ಚುನಾವಣೆ ಮುಗಿದ ಬಳಿಕ ವಿವಿಧ ರಾಷ್ಟ್ರೀಯ ವಾಹಿನಿಗಳು ಚುನಾವಣೋತ್ತರ ಸಮೀಕ್ಷೆಗಳನ್ನು ನಡೆಸಿದ್ದವು. ಎಲ್ಲಾ ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ 115, ಬಿಜೆಪಿ 76, ಬಿಎಸ್‌ಪಿ 0, ಇತರರು 8 ಸ್ಥಾನಗಳಲ್ಲಿ ಜಯಗಳಿಸಬಹುದು ಎಂದು ಹೇಳಲಾಗಿತ್ತು.

ವಿರೋಧಿ ಅಲೆಯಲ್ಲಿ ಮುದುಡಿದ ಕಮಲ

ವಿರೋಧಿ ಅಲೆಯಲ್ಲಿ ಮುದುಡಿದ ಕಮಲ

ಆಡಳಿತ ವಿರೋಧಿ ಅಲೆಯಲ್ಲಿ ಬಿಜೆಪಿ ಕೊಚ್ಚಿ ಹೋಗಿದ್ದು ಭಾರಿ ಹಿನ್ನಡೆ ಅನುಭವಿಸಿದೆ. 2013ರ ಚುನಾವಣೆಯಲ್ಲಿ 163 ಕ್ಷೇತ್ರಗಳಲ್ಲಿ ಗೆದ್ದಿದ್ದ ಪಕ್ಷ 5 ವರ್ಷ ಅಧಿಕಾರ ನಡೆಸಿತ್ತು. ಆದರೆ, ವಸುಂಧರಾ ರಾಜೆ ಅವರು ಜನರ ಕೈಗೆ ಸಿಗುವುದಿಲ್ಲ, ಪಕ್ಷದ ಹಿರಿಯ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪಗಳಿತ್ತು. ಇವು ಚುನಾವಣೆಯಲ್ಲಿ ಹೊಡೆತ ನೀಡಿದ್ದು, ಪಕ್ಷ ಹಿನ್ನಡೆ ಅನುಭವಿಸಿದೆ.

ಟುಡೇಸ್ ಚಾಣಕ್ಯ ಫಲಿತಾಂಶ

ಟುಡೇಸ್ ಚಾಣಕ್ಯ ಫಲಿತಾಂಶ

ಟುಡೇಸ್ ಚಾಣಕ್ಯ ಚುನಾವಣೋತ್ತರ ಸಮೀಕ್ಷೆ ನಿಖರವಾಗಿರುತ್ತದೆ ಎಂಬುದು ಹಲವು ಬಾರಿ ಸಾಬೀತಾಗಿದೆ. ರಾಜಸ್ಥಾನದಲ್ಲೂ ಟುಡೇಸ್ ಚಾಣಾಕ್ಯ ಸಮೀಕ್ಷೆ ನಡೆಸಿತ್ತು. ಕಾಂಗ್ರೆಸ್ 123, ಬಿಜೆಪಿ 68, ಇತರರು 8 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆಯ ವರದಿ ಹೇಳಿತ್ತು.

English summary
Rajasthan assembly elections 2018 result announced on December 11, 2018. Here is a comparison of exit poll result and election result of hte 199 assembly seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X