ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ರಾಜಸ್ಥಾನದಲ್ಲಿ ಮೊದಲ ಮಂಕಿಪಾಕ್ಸ್ ಶಂಕಿತ ಪ್ರಕರಣ

|
Google Oneindia Kannada News

ಜೈಪುರ್, ಆಗಸ್ಟ್ 02: ರಾಜಸ್ಥಾನದಲ್ಲಿ ಮೊದಲ ಮಂಕಿಪಾಕ್ಸ್ ಶಂಕಿತ ಪ್ರಕರಣ ವರದಿಯಾಗಿದೆ. 20 ವರ್ಷ ವಯಸ್ಸಿನ ಯುವಕನಲ್ಲಿ ರೋಗದ ಲಕ್ಷಣಗಳು ಕಂಡು ಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಕಿಪಾಕ್ಸ್ ಲಕ್ಷಣ ಕಂಡು ಬಂದಿರುವ ವ್ಯಕ್ತಿಯ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ರಾಜಸ್ಥಾನದ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀಕ್ಷಕ ಡಾ. ಅಜಿತ್ ಸಿಂಗ್ ತಿಳಿಸಿದ್ದಾರೆ.

ಯುವಕನನ್ನು ಭಾನುವಾರ ತಡರಾತ್ರಿ ಕಿಶನ್‌ಗಢದಿಂದ ಆಸ್ಪತ್ರೆಗೆ ಕರೆ ತರಲಾಗಿದ್ದು, ಮಂಕಿಪಾಕ್ಸ್ ಸೋಂಕಿತರ ಚಿಕಿತ್ಸೆಗಾಗಿಯೇ ಸಿದ್ಧಪಡಿಸಲಾಗಿರುವ ವಿಶೇಷ ವಾರ್ಡ್‌ನ ನಿಗಾ ಘಟಕದಲ್ಲಿ ಇರಿಸಲಾಗಿದೆ.

Rajasthan: first suspected case of monkeypox is reported

ಯುವಕನಲ್ಲಿ ಮಂಕಿಪಾಕ್ಸ್ ರೋಗದ ಲಕ್ಷಣ: ಭಾನುವಾರ ಸರ್ಕಾರಿ ಆಸ್ಪತ್ರೆಗೆ ಬಂದ 20 ವರ್ಷದ ಯುವಕನಲ್ಲಿ ಮಂಕಿಪಾಕ್ಸ್ ಸೋಂಕಿನ ಲಕ್ಷಣಗಳು ಕಂಡು ಬಂದಿವೆ. ಕಳೆದ ನಾಲ್ಕು ದಿನಗಳಿಂದ ಯುವಕ ತೀವ್ರ ಜ್ವರದಿಂದ ಬಳಲುತ್ತಿದ್ದು, ದೇಹದ ಮೇಲೆ ದದ್ದುಗಳಿವೆ ಎಂದು ರಾಜಸ್ಥಾನದ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀಕ್ಷಕ ಡಾ. ಅಜಿತ್ ಸಿಂಗ್ ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಐದು ಮಂಕಿಪಾಕ್ಸ್ ಸೋಂಕಿತ ಪ್ರಕರಣ ಪತ್ತೆ; ಜಾಗತಿಕ ಮಟ್ಟದಲ್ಲಿ ಈಗಾಗಲೇ ಭೀತಿ ಹುಟ್ಟು ಹಾಕಿರುವ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಭಾರತದಲ್ಲೂ ನಿಧಾನವಾಗಿ ಹೆಚ್ಚುತ್ತಿದೆ. ದೇಶದಲ್ಲಿ ಇದುವರೆಗೂ 5 ಮಂಕಿಪಾಕ್ಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಕೇರಳದಲ್ಲಿ ಮೂರು ಪ್ರಕರಣಗಳು ವರದಿಯಾಗಿದ್ದರೆ, ದೆಹಲಿಯಲ್ಲಿ ಒಂದು ಮತ್ತು ಆಂಧ್ರಪ್ರದೇಶದ ಗುಂಟೂರಿನಲ್ಲಿ ಒಬ್ಬ ವ್ಯಕ್ತಿಗೆ ಮಂಕಿಪಾಕ್ಸ್ ತಗುಲಿರುವುದು ದೃಢಪಟ್ಟಿದೆ.

ಜಗತ್ತಿನ 78 ರಾಷ್ಟ್ರಗಳಲ್ಲಿ ಮಂಕಿಪಾಕ್ಸ್: ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ, ಜಗತ್ತಿನ 78 ರಾಷ್ಟ್ರಗಳಲ್ಲಿ ಸೇರಿ 18,000ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. "ತಮಗೆ ಸೋಂಕು ತಗುಲಿರುವ ಬಗ್ಗೆ ದೇಶಗಳು, ಸಮುದಾಯಗಳು ಮತ್ತು ಜನರು ಸ್ವಯಂಪ್ರೇರಿತರಾಗಿ ಮಾಹಿತಿ ನೀಡಿದರೆ ಹಾಗೂ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ, ಮಂಕಿಪಾಕ್ಸ್ ಸೋಂಕು ಹರಡುವಿಕೆಯನ್ನು ತಕ್ಷಣಕ್ಕೆ ತಡೆಯುವುದಕ್ಕೆ ಸಾಧ್ಯವಿದೆ," ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ ಟೆಡ್ರೊಸ್ ಗೆಬ್ರೆಯೆಸಸ್ ಹೇಳಿದ್ದಾರೆ.

Recommended Video

Team India ಆಟಗಾರರು ಅರ್ಶದೀಪ್ ಜೆರ್ಸಿ ತೊಡಲು ಇದೇ ಕಾರಣ | *Cricket | OneIndia Kannada

ಮಂಕಿಪಾಕ್ಸ್ ಒಂದು ಝೂನೋಟಿಕ್ ಕಾಯಿಲೆಯಾಗಿದ್ದು, ಸಿಡುಬುಗೆ ಕಾರಣವಾಗುವ ವೈರಸ್‌ಗಳ ಒಂದೇ ಕುಟುಂಬಕ್ಕೆ ಸೇರಿದೆ. ಈ ರೋಗವು ಪಶ್ಚಿಮ ಮತ್ತು ಮಧ್ಯ ಆಫ್ರಿಕಾದಂತಹ ಪ್ರದೇಶಗಳಲ್ಲಿ ಸ್ಥಳೀಯವಾಗಿದೆ. ಆದರೆ ಇತ್ತೀಚೆಗೆ, ಆಸ್ಟ್ರೇಲಿಯಾ, ಯುಕೆ ಮತ್ತು ಯುಎಸ್ ಸೇರಿದಂತೆ ಇತರೆ ರಾಷ್ಟ್ರಗಳಲ್ಲೂ ಹೆಚ್ಚಾಗುತ್ತಿದೆ.

English summary
Rajasthan: first suspected case of monkeypox is reported. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X