ರಾಜಸ್ಥಾನ ವಿಧಾನಸಭೆ ಅಧಿವೇಶನ ಕರೆಯಲು ರಾಜ್ಯಪಾಲರ ಆದೇಶ
ಜೈಪುರ, ಜುಲೈ 27 : ರಾಜಸ್ಥಾನ ವಿಧಾನಸಭೆ ಅಧಿವೇಶನ ಕರೆಯಲು ರಾಜ್ಯಪಾಲ ಕಲ್ರಾಜ್ ಮಿಶ್ರಾ ಒಪ್ಪಿಗೆ ನೀಡಿದ್ದಾರೆ. ಅಧಿವೇಶನ ಕರೆಯುವ ವಿಚಾರದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಜಟಾಪಟಿ ನಡೆಯುತ್ತಿತ್ತು.
Recommended Video
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಧಾನಸಭೆ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಶುಕ್ರವಾರ ಮನವಿ ಸಲ್ಲಿಸಿದ್ದರು. ಆದರೆ, ಒಪ್ಪಿಗೆ ಕೊಡದಿದ್ದಾಗ ಭಾನುವಾರ ಮತ್ತೊಮ್ಮೆ ಪತ್ರವನ್ನು ಬರೆದಿದ್ದರು.
ಜುಲೈ 31ರಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಪಾಲರನ್ನು ಒತ್ತಾಯಿಸಿದ್ದರು. ಕೊರೊನಾ ಪರಿಸ್ಥಿತಿ ಕುರಿತು ಚರ್ಚಿಸಲು ಅಧಿವೇಶನ ಕರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ರಾಜಸ್ಥಾನದ ಕಾಂಗ್ರೆಸ್ ಸರ್ಕಾರಕ್ಕೆ ಬಹುಮತವಿಲ್ಲ ಎಂಬ ಕೂಗು ಕೇಳಿ ಬರುತ್ತಿದೆ. ರಾಜ್ಯಪಾಲರು ಬಹುಮತ ಸಾಬೀತು ಮಾಡುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಸೂಚನೆ ನೀಡಲಿದ್ದಾರೆಯೇ? ಎಂಬುದು ಇನ್ನೂ ತಿಳಿದುಬಂದಿಲ್ಲ.
ಉಪಮುಖ್ಯಯಾಗಿದ್ದ ಸಚಿನ್ ಪೈಲೆಟ್ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವಿನ ಅಸಮಾಧಾನದಿಂದಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಆರಂಭವಾಗಿದೆ. ಕಾಂಗ್ರೆಸ್ ಸಹ ಎರಡು ಭಾಗವಾಗಿದ್ದು, ಸಚಿನ್ ಪೈಲೆಟ್ ಜೊತೆಗೆ ಹಲವಾರು ಶಾಸಕರು ಇದ್ದಾರೆ.
ಸರ್ಕಾರ ವಿಶ್ವಾಸಮತ ಸಾಬೀತು ಪಡಿಸಲು ಮುಂದಾದರೆ ಸಚಿನ್ ಪೈಲೆಟ್ ಬಣದಲ್ಲಿ ಎಷ್ಟು?, ಅಶೋಕ್ ಗೆಹ್ಲೋಟ್ ಬಣದಲ್ಲಿ ಎಷ್ಟು ಶಾಸಕರು ಇದ್ದಾರೆ? ಎಂಬುದು ತಿಳಿಯಲಿದೆ. ಅಶೋಕ್ ಗೆಹ್ಲೋಟ್ ನಮ್ಮ ಬಳಿ 104 ಶಾಸಕರಿದ್ದಾರೆ ಎಂದು ಹೇಳಿಕೊಂಡಿದ್ದಾರೆ.












Click it and Unblock the Notifications