• search
 • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜಸ್ಥಾನ ವಿಧಾನಸಭೆ ಅಧಿವೇಶನ ಕರೆಯಲು ರಾಜ್ಯಪಾಲರ ಆದೇಶ

|

ಜೈಪುರ, ಜುಲೈ 27 : ರಾಜಸ್ಥಾನ ವಿಧಾನಸಭೆ ಅಧಿವೇಶನ ಕರೆಯಲು ರಾಜ್ಯಪಾಲ ಕಲ್ರಾಜ್ ಮಿಶ್ರಾ ಒಪ್ಪಿಗೆ ನೀಡಿದ್ದಾರೆ. ಅಧಿವೇಶನ ಕರೆಯುವ ವಿಚಾರದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಜಟಾಪಟಿ ನಡೆಯುತ್ತಿತ್ತು.

   Helina Anti tank Missile, Indian Army | Oneindia Kannada

   ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಧಾನಸಭೆ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಶುಕ್ರವಾರ ಮನವಿ ಸಲ್ಲಿಸಿದ್ದರು. ಆದರೆ, ಒಪ್ಪಿಗೆ ಕೊಡದಿದ್ದಾಗ ಭಾನುವಾರ ಮತ್ತೊಮ್ಮೆ ಪತ್ರವನ್ನು ಬರೆದಿದ್ದರು.

   ಸಚಿನ್ ಪೈಲೆಟ್ ಅನರ್ಹತೆ ಪ್ರಕರಣ; ಹೈಕೋರ್ಟ್ ತೀರ್ಪು ಪ್ರಕಟ

   ಜುಲೈ 31ರಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಪಾಲರನ್ನು ಒತ್ತಾಯಿಸಿದ್ದರು. ಕೊರೊನಾ ಪರಿಸ್ಥಿತಿ ಕುರಿತು ಚರ್ಚಿಸಲು ಅಧಿವೇಶನ ಕರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

   ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ತಿರುವು; ಸ್ಪೀಕರ್ ಅರ್ಜಿ ವಾಪಸ್

   ರಾಜಸ್ಥಾನದ ಕಾಂಗ್ರೆಸ್ ಸರ್ಕಾರಕ್ಕೆ ಬಹುಮತವಿಲ್ಲ ಎಂಬ ಕೂಗು ಕೇಳಿ ಬರುತ್ತಿದೆ. ರಾಜ್ಯಪಾಲರು ಬಹುಮತ ಸಾಬೀತು ಮಾಡುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಸೂಚನೆ ನೀಡಲಿದ್ದಾರೆಯೇ? ಎಂಬುದು ಇನ್ನೂ ತಿಳಿದುಬಂದಿಲ್ಲ.

   ಅಧಿವೇಶನ ನಡೆಸಿ; ರಾಜ್ಯಪಾಲರಿಗೆ ಅಶೋಕ್ ಗೆಹ್ಲೋಟ್ ಮನವಿ!

   ಉಪಮುಖ್ಯಯಾಗಿದ್ದ ಸಚಿನ್ ಪೈಲೆಟ್ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವಿನ ಅಸಮಾಧಾನದಿಂದಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಆರಂಭವಾಗಿದೆ. ಕಾಂಗ್ರೆಸ್ ಸಹ ಎರಡು ಭಾಗವಾಗಿದ್ದು, ಸಚಿನ್ ಪೈಲೆಟ್ ಜೊತೆಗೆ ಹಲವಾರು ಶಾಸಕರು ಇದ್ದಾರೆ.

   ಸರ್ಕಾರ ವಿಶ್ವಾಸಮತ ಸಾಬೀತು ಪಡಿಸಲು ಮುಂದಾದರೆ ಸಚಿನ್ ಪೈಲೆಟ್ ಬಣದಲ್ಲಿ ಎಷ್ಟು?, ಅಶೋಕ್ ಗೆಹ್ಲೋಟ್ ಬಣದಲ್ಲಿ ಎಷ್ಟು ಶಾಸಕರು ಇದ್ದಾರೆ? ಎಂಬುದು ತಿಳಿಯಲಿದೆ. ಅಶೋಕ್ ಗೆಹ್ಲೋಟ್ ನಮ್ಮ ಬಳಿ 104 ಶಾಸಕರಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

   English summary
   Rajasthan Governor Kalraj Mishra ordered state government to call assembly session. CM Ashok Gehlot write a letter to governor to start the assembly session from July 31.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X