ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Corona Effect: ರಾಜಸ್ಥಾನದಲ್ಲಿ ಸಂಜೆ 6 ರಿಂದ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ

|
Google Oneindia Kannada News

ಜೈಪುರ್, ಏಪ್ರಿಲ್ 14: ರಾಜಸ್ಥಾನದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಮಿತಿ ಮೀರುತ್ತಿದ್ದಂತೆ ರಾತ್ರಿ ನಿಷೇಧಾಜ್ಞೆಯ ಅವಧಿಯನ್ನು ಹೆಚ್ಚುವರಿಯಾಗಿ ಎರಡು ಗಂಟೆಗಳ ಕಾಲ ವಿಸ್ತರಣೆ ಮಾಡಲಾಗುವುದು ಎಂದು ಸರ್ಕಾರ ಆದೇಶಿಸಿದೆ.

ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಅಧಿಸೂಚನೆ ಪ್ರಕಾರ, ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೂ 12 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಇದಕ್ಕೂ ಮೊದಲು ರಾತ್ರಿ 8 ರಿಂದ ಬೆಳಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿಗೊಳಿಸುವುದಕ್ಕೆ ಸರ್ಕಾರ ತೀರ್ಮಾನಿಸಿತ್ತು.

Explained: ಭಾರತದಲ್ಲಿ ಭಯ ಹುಟ್ಟಿಸುತ್ತಿರುವುದೇಕೆ ಕೊರೊನಾವೈರಸ್?Explained: ಭಾರತದಲ್ಲಿ ಭಯ ಹುಟ್ಟಿಸುತ್ತಿರುವುದೇಕೆ ಕೊರೊನಾವೈರಸ್?

ಸರ್ಕಾರದ ಹೊಸ ನಿಯಮ ಏಪ್ರಿಲ್ 16 ರಿಂದ ಏಪ್ರಿಲ್ 30ರವರೆಗೂ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಸರ್ಕಾರಿ ಕಚೇರಿಗಳು ಸಂಜೆ 4 ಗಂಟೆ ಮತ್ತು ಇತರೆ ವಾಣಿಜ್ಯ ಅಂಗಡಿ-ಮುಂಗಟ್ಟುಗಳು ಸಂಜೆ 5 ಗಂಟೆಗೆ ಬಾಗಿಲು ಹಾಕುವುದಕ್ಕೆ ಸೂಚನೆ ನೀಡಲಾಗಿದೆ.

Rajasthan Govt Announces Night Curfew In All Cities Between 6 pm To 6 am

ರಾಜಸ್ಥಾನದಲ್ಲಿ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರಾಜ್ಯ ಸರ್ಕಾರವು ಮುಂದೂಡಿದೆ. ಉಳಿದಂತೆ 8, 9, 11ನೇ ತರಗತಿ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆಗಳಿಲ್ಲದೇ ಪಾಸ್ ಮಾಡುವಂತೆ ಸೂಚನೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ 6200 ಪ್ರಕರಣ:

ರಾಜಸ್ಥಾನದಲ್ಲಿ ಒಂದೇ ದಿನ 6200 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,81,292ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1956 ಸೋಂಕಿತರು ಗುಣಮುಖರಾಗಿದ್ದರೆ, 29 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೂ ಕೊವಿಡ್-19 ಸೋಂಕಿಗೆ 3008 ಜನರು ಪ್ರಾಣ ಬಿಟ್ಟಿದ್ದು, 44,905 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

English summary
Rajasthan Govt Announces Night Curfew In All Cities Between 6 pm To 6 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X