ಪಾಕಿಸ್ತಾನದ 21 ಜನರಿಗೆ ಭಾರತೀಯ ಪೌರತ್ವ ನೀಡಿದ ರಾಜಸ್ಥಾನ

ಜೈಪುರ, ನವೆಂಬರ್ 28: ಪಾಕಿಸ್ತಾನದಿಂದ ವಲಸೆ ಬಂದು ಸುಮಾರು 19 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿದ್ದ 21 ಜನರಿಗೆ ರಾಜಸ್ಥಾನ ಸರ್ಕಾರ ಭಾರತದ ಪೌರತ್ವ ನೀಡಿದೆ.

ಈ ಪಾಕ್ ಪ್ರಜೆಗಳು ಅಲ್ಲಿಂದ ಸ್ಥಳಾಂತರಗೊಂಡ ನಂತರ ಇಲ್ಲಿಯೇ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದರು. ಇವರಿಗೆ ಭಾರತೀಯ ಪೌರತ್ವ ಇಲ್ಲದ ಕಾರಣ, ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಮತ್ತು ಇತರ ಸರ್ಕಾರಿ ಯೋಜನೆಗಳನ್ನು ದೊರಕಿಸಿಕೊಳ್ಳಲು ಪೌರತ್ವದ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ಜೈಪುರ ಜಿಲ್ಲಾಧಿಕಾರಿ ಜಗ್ರೂಪ್ ಸಿಂಗ್ ಹೇಳಿದ್ದಾರೆ.

ಕಳೆದ ಎರಡು ತಿಂಗಳಲ್ಲಿ 35 ಪಾಕ್ ಪ್ರಜೆಗಳಿಗೆ ಪೌರತ್ವ ನೀಡಲಾಗಿದೆ. ಇನ್ನೂ 28 ಪೌರತ್ವದ ಅರ್ಜಿಗಳು ಪರಿಶೀಲನೆಯಲ್ಲಿವೆ, 68 ಪೌರತ್ವದ ಅರ್ಜಿಗಳು ತನಿಖಾ ಹಂತದಲ್ಲಿವೆ ಅರ್ಜಿಗಳನ್ನು ಸರಿಯಾಗಿ ಪರಿಶೀಲಿಸಿ ಪೌರತ್ವ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಗ್ರೂಪ್ ಸಿಂಗ್ ಹೇಳಿದ್ದಾರೆ.

Rajasthan Granted Indian Citizenship To 21 People of Pakistan

ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ನಿತ್ಯಾನಂದ ರಾಯ್ ಲೋಕಸಭೆಗೆ ನೀಡಿರುವ ಮಾಹಿತಿ ಪ್ರಕಾರ ಜುಲೈ ತಿಂಗಳಿನಲ್ಲಿ ಒಟ್ಟು 1,310 ವಲಸಿಗರಿಗೆ ರಾಜಸ್ಥಾನ ಸರ್ಕಾರ ಪೌರತ್ವ ನೀಡಿದೆ. ಜೋಧಪುರ್, ಜೆಸ್ಮಲೇರ್ ಮತ್ತು ಜೈಪುರ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ

ಅಷ್ಟೇ ಅಲ್ಲದೇ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳ ಸಿಖ್ಖ, ಬೌದ್ಧರು, ಜೈನರು, ಪಾರ್ಸಿ ಹಾಗೂ ಕ್ರಿಶ್ಚಿಯನ್ ಸಮುದಾಯದ ವಲಸಿಗರಿಗೆ ಸೂಕ್ತ ತನಿಖೆ ನಡೆಸಿ ಭಾರತೀಯ ಪೌರತ್ವ ನೀಡಲು ಜಿಲ್ಲಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+