ರಾಜಸ್ಥಾನದ ಆರೋಗ್ಯ ಸಚಿವ ರಘು ಶರ್ಮಾಗೆ ಕೊರೊನಾ ಸೋಂಕು

ಜೈಪುರ, ನವೆಂಬರ್ 23: ರಾಜಸ್ಥಾನದ ಆರೋಗ್ಯ ಸಚಿವ ರಘು ಶರ್ಮಾಗೆ ಕೊರೊನಾ ಸೋಂಕು ತಗುಲಿದೆ.

ಈ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದು, ರಘು ಶರ್ಮಾ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಚಾರವನ್ನು ತಿಳಿಸಿದ್ದಾರೆ. ಈ ನಡುವೆ ರಘು ಶರ್ಮಾ ಅವರೂ ಕೂಡ ಟ್ವೀಟ್ ಮಾಡಿ, ತಮಗೆ ಕೊರೋನಾ ಸೋಂಕು ತಗುಲಿದ್ದು, ತಮ್ಮೊಂದಿಗೆ ಸಂಪರ್ಕದಲ್ಲಿದ್ಜ ಜನರು ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.

ಸಂಪುಟದ ಸಚಿವರಾಗಿರುವ ಡಾ.ರಘು ಶರ್ಮಾ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

Rajasthan Health Minister Raghu Sharma Tests Positive For Coronavirus

ಆರಂಭದಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿತ್ತು. ಬಳಿಕ ಪರೀಕ್ಷೆಗೊಳಗಾಗಿದ್ದು, ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆಗೊಳಗಾಗಿ ಎಂದು ಶರ್ಮಾ ಅವರು ಮನವಿ ಮಾಡಿಕೊಂಡಿದ್ದಾರೆ.

ರಾಜಸ್ಥಾನದ 21 ಜಿಲ್ಲೆಗಳಲ್ಲಿ ಪಂಚಾಯತ್ ಸಮಿತಿ ಮತ್ತು ಜಿಲಾ ಪರಿಷತ್ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಸೋಮವಾರ ಬೆಳಿಗ್ಗೆ 7:30 ಕ್ಕೆ ಪಂಚಾಯತ್ ಸಮಿತಿ ಮತ್ತು ಜಿಲ್ಲಾ ಪರಿಷತ್ ಸ್ಥಾನಗಳ ಚುನಾವಣೆಗೆ ಮತದಾನ ಪ್ರಾರಂಭವಾಗಿದ್ದು, ಸಂಜೆ 5 ರವರೆಗೆ ಮತದಾರರು ಮತ ಚಲಾಯಿಸಬಹುದು.

ರಾಜಸ್ಥಾನದ 21 ಜಿಲ್ಲೆಗಳಲ್ಲಿ ಪಂಚಾಯತ್ ಸಂಸ್ಥೆಗಳಿಗೆ ಮೊದಲ ಹಂತದ ಚುನಾವಣೆಗೆ 10,131 ಮತದಾನ ಕೇಂದ್ರಗಳಲ್ಲಿ 65 ಪಂಚಾಯತ್ ಸಮಿತಿಗಳ 1,310 ಸದಸ್ಯರನ್ನು ಮತ್ತು ಸಂಬಂಧಿತ ಜಿಲ್ಲಾ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಮತದಾನ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+