ರಾಜಸ್ಥಾನ ಬಿಕ್ಕಟ್ಟು; ಸಚಿನ್ ಪೈಲೆಟ್ ಬಣಕ್ಕೆ ತಾತ್ಕಾಲಿಕ ನೆಮ್ಮದಿ!

ಜೈಪುರ, ಜುಲೈ 17 : ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿನಲ್ಲಿ ಸಚಿನ್ ಪೈಲೆಟ್ ಮತ್ತು ಅವರ ಬೆಂಬಲಿತ ಶಾಸಕರಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ. ಶಾಸಕರನ್ನು ಅನರ್ಹಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಸೋಮವಾರಕ್ಕೆ ಮುಂದಕ್ಕೆ ಹೋಗಿದೆ.

Recommended Video

      Yeddyurappa Government Fail Again!! | Oneindia Kannada

      ರಾಜಸ್ಥಾನ ವಿಧಾನಸಭೆ ಸ್ಪೀಕರ್ ಸಚಿನ್ ಪೈಲೆಟ್ ಮತ್ತುಇತರ 18 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸುವ ಕುರಿತು ಶೋಕಾಸ್ ನೋಟಿಸ್ ನೀಡಿದ್ದರು. ಶಾಸಕರು ಸ್ಪೀಕರ್ ನೀಡಿರುವ ನೋಟಿಸ್‌ ಅನ್ನು ರಾಜಸ್ಥಾನ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು.

      ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮಂಗಳವಾರ ಸಂಜೆಯ ತನಕ ಸ್ಪೀಕರ್ ನೋಟಿಸ್‌ಗೆ ತಡೆ ನೀಡಿದೆ. ಇದರಿಂದಾಗಿ ಅನರ್ಹತೆ ಭೀತಿ ಎದುರಿಸುತ್ತಿದ್ದ ಶಾಸಕರಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ. ಸೋಂವಾರ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ.

      Rajasthan High Court Deferred Speaker Notice Till July 21

      ವಿಧಾನಸಭೆ ಸ್ಪೀಕರ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತರಕರ ಪರವಾಗಿ ಮಹೇಶ್ ಜೋಶಿ ವಾದ ಮಂಡನೆ ಮಾಡಿದರು.

      ಸಚಿನ್ ಪೈಲೆಟ್ ಮತ್ತು ಶಾಸಕರ ಪರವಾಗಿ ಹರೀಶ್ ಸಾಳ್ವೆ ಮತ್ತು ಮುಕುಲ್ ರೋಹ್ಟಗಿ ವಾದವನ್ನು ಮಂಡಿಸಲಿದ್ದಾರೆ. ಸ್ಪೀಕರ್ ಒತ್ತಡಕ್ಕೆ ಒಳಗಾಗಿ ನೋಟಿಸ್ ನೀಡಿದ್ದಾರೆ. ಅದನ್ನು ರದ್ದುಗೊಳಿಸಬೇಕು ಎಂದು ಶಾಸಕರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

      ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಉಪ ಮುಖ್ಯಮಂತ್ರಿ ಸಚಿನ್ ಪೈಲೆಟ್ ಅಸಮಾಧಾನಗೊಂಡಿದ್ದರು. ಆಪ್ತ ಶಾಸಕರ ಜೊತೆ ದೆಹಲಿಗೆ ತೆರಳಿದ್ದರು. ಸಚಿನ್ ಪೈಲೆಟ್ ಸೇರಿದಂತೆ ಎಲ್ಲರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+