ರಾಜಸ್ಥಾನದಲ್ಲಿ ಶಾಸಕರ ಖರೀದಿ ಆರೋಪ; ಕೇಂದ್ರ ಸಚಿವರಿಗೆ ನೋಟಿಸ್!
ಜೈಪುರ, ಜುಲೈ 20 : ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಪತನಗೊಳಿಸುವ ಸಂಚಿನ ಪ್ರಕರಣದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ. ಸಿಎಂ ಅಶೋಕ್ ಗೆಹ್ಲೋಟ್ ಸೂಚನೆಯಂತೆ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ಸರ್ಕಾರ ಪತನಗೊಳಿಸುವ ಸಂಚಿನ ಭಾಗವಾಗಿ ನಡೆಸಿದ ಸಂಭಾಷಣೆಗಳಿಗೆ ಸಂಬಂಧಿಸಿದಂತೆ ಎಸಿಬಿ 2 ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದೆ. ಈಗ ಕೇಂದ್ರ ಸಚಿವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಚಿವರು, "ನಾನು ಯಾವುದೇ ತನಿಖೆ ಎದುರಿಸಲು ಸಿದ್ಧ. ಆಡಿಯೋ ಕ್ಲಿಪ್‌ನಲ್ಲಿರುವುದು ನನ್ನ ಧ್ವನಿಯಲ್ಲ. ಹೀಗಾಗಿ ನನ್ನದೇನೂ ತಪ್ಪಿಲ್ಲ" ಎಂದು ಹೇಳಿಕೆ ನೀಡಿದ್ದರು.

ಕಾಂಗ್ರೆಸ್ ಮುಖಂಡ ಅಜಯ್ ಮಾಕೇನ್, "ಕಾಂಗ್ರೆಸ್ ಶಾಸಕ ಭನ್ವರ್‌ಲಾಲ್ ಶರ್ಮಾ, ಶೇಖಾವತ್ ಹಾಗೂ ಸಂಜಯ್ ಜೈನ್ ನಡುವೆ ನಡೆದ ಸಂಭಾಷಣೆಯ ಆಡಿಯೋ ಟೇಪ್‌ಗಳಿಗೆ ಸಂಬಂಧಿಸಿದಂತೆ ಎಸಿಬಿ ಪ್ರಕರಣ ದಾಖಲು ಮಾಡಿದೆ" ಎಂದು ಹೇಳಿದ್ದಾರೆ.
ರಾಜಸ್ಥಾನದ ಕಾಂಗ್ರೆಸ್ ನಾಯಕರು ಕೇಂದ್ರ ಸಚಿವರಾಗಿ ಮುಂದುವರೆಯಲು ಶೇಖಾವತ್‌ಗೆ ನೈತಿಕತೆ ಇಲ್ಲ. ತನಿಖೆಯಲ್ಲಿ ಪ್ರಭಾವ ಬೀರುವ ಸಾಧ್ಯತೆ ಇದೆ. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.












Click it and Unblock the Notifications