ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನ : ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ v/s ಬಿಜೆಪಿ ಸಮರ

By ವಿನೋದ್ ಕುಮಾರ್ ಶುಕ್ಲಾ
|
Google Oneindia Kannada News

ಜೈಪುರ, ನವೆಂಬರ್ 29 : ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಡಿಸೆಂಬರ್ 7ರಂದು ರಾಜಸ್ಥಾನ ವಿಧಾನಸಭೆಯ 200 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಸಮಾವೇಶ, ಮನೆ-ಮನೆ ಪ್ರಚಾರವನ್ನು ಮಾಡುತ್ತಾ ಮತ ಯಾಚನೆ ಮಾಡುತ್ತಿದ್ದಾರೆ. ಪಕ್ಷದ ಯುವ ಘಟಕಗಳ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

ರಾಜಸ್ಥಾನ ಚುನಾವಣೆ : ರೆಬಲ್ ನಾಯಕರನ್ನು ಉಚ್ಛಾಟಿಸಿದ ಕಾಂಗ್ರೆಸ್ರಾಜಸ್ಥಾನ ಚುನಾವಣೆ : ರೆಬಲ್ ನಾಯಕರನ್ನು ಉಚ್ಛಾಟಿಸಿದ ಕಾಂಗ್ರೆಸ್

ರಾಜಸ್ಥಾನದ ಪಕ್ಷದ ಕಚೇರಿಯಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣಗಳ ಕಚೇರಿ ತೆರೆದಿದೆ. ಕಚೇರಿಯಲ್ಲಿ ಪ್ರತಿ ಅಭ್ಯರ್ಥಿ ಎಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂಬುದರಿಂದ ಹಿಡಿದು ಎಲ್ಲಾ ಮಾಹಿತಿ ಲಭ್ಯವಾಗುತ್ತಿದೆ. ಕಾಂಗ್ರೆಸ್ ಮೊದಲ ಬಾರಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಆರಂಭಿಸಿದ್ದು, ಬಿಜೆಪಿಗೆ ಹೋಲಿಕೆ ಮಾಡಿದರೆ ಪ್ರಚಾರದಲ್ಲಿ ಹಿಂದುಳಿದಿದೆ.

ಮೋದಿ ಅಲೆ ರಾಜಸ್ಥಾನದಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದೆಯೇ?ಮೋದಿ ಅಲೆ ರಾಜಸ್ಥಾನದಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದೆಯೇ?

Rajasthan : Political parties fighting a parallel battle on social media

ಪಕ್ಷದ ಕೇಂದ್ರ ಕಚೇರಿಯಿಂದ ಬರುವ ನಿರ್ದೇಶನವನ್ನು ಈ ತಂಡಗಳು ಪಾಲಿಸುತ್ತಿವೆ. ಎಷ್ಟು ಸಾಧ್ಯವೋ ಅಷ್ಟು ಜನರನ್ನು ತಲುಪುವುದು, ಫೇಸ್‌ಬುಕ್, ವಾಟ್ಸಪ್ ಮೂಲಕ ಪ್ರಚಾರವನ್ನು ನಡೆಸುವುದು ತಂಡದ ಕಾರ್ಯವಾಗಿದೆ.

3 ರಾಜ್ಯಗಳ ಚುನಾವಣೆ: ರಾಜಸ್ಥಾನದಲ್ಲಿ ಕಾಂಗ್ರೆಸ್ ಪಾರುಪತ್ಯ Infographics3 ರಾಜ್ಯಗಳ ಚುನಾವಣೆ: ರಾಜಸ್ಥಾನದಲ್ಲಿ ಕಾಂಗ್ರೆಸ್ ಪಾರುಪತ್ಯ Infographics

ಬಿಜೆಪಿ ಕಚೇರಿಯಲ್ಲಿ ಕೆಲಸ ಮಾಡುವ ಯುವಕರು ಹೇಳುವಂತೆ, ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದು ಅವರ ಜವಾಬ್ದಾರಿಯಾಗಿದೆ. ಎಷ್ಟು ಸಾಧ್ಯವೋ ಅಷ್ಟು ಮಾಹಿತಿ ನೀಡುತ್ತೇವೆ. ಅವರು ಯೋಜನೆಯ ಫಲಾನುಭವಿಗಳಾಗಿದ್ದಾರೆ ಅವರು ಮತದಾರರಾಗಿ ಬದಲಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಯುವಕರು ನರೇಂದ್ರ ಮೋದಿ ಅವರು ನೀಡಿದ ಭರವಸೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ. ಅವುಗಳನ್ನು ಪೂರೈಸಲು ಮೋದಿ ವಿಫಲರಾಗಿದ್ದಾರೆ ಎಂದು ಅವರು ಪ್ರಚಾರ ಮಾಡುತ್ತಿದ್ದಾರೆ.

ಪ್ರತಿ ವ್ಯಕ್ತಿಯ ಖಾತೆಗೆ 15 ಲಕ್ಷ ರೂ., ಕಪ್ಪು ಹಣ, ಭ್ರಷ್ಟಾಚಾರ, ಲಲಿತ್ ಮೋದಿ, ವಿಜಯ್ ಮಲ್ಯ, ನೀರವ್ ಮೋದಿ ವಿಚಾರವನ್ನು ಹೆಚ್ಚಾಗಿ ಹಂಚಲಾಗುತ್ತಿದೆ. ಇವುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗುತ್ತಿವೆ.

English summary
The Bharatiya Janata Party (BJP) and the Congress leaders are busy canvasing in their respective constituencies by organising rallies, meeting and door-to-door campaign but social media campaign of political parties contesting elections in Rajasthan is being handled by youths associated with the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X