ರಾಜಸ್ಥಾನ: ಹುತಾತ್ಮರಾದ ಸಹೋದರನ ಪ್ರತಿಮೆಗೆ ರಾಖಿ ಕಟ್ಟಿದ ಮಹಿಳೆ
ರಾಜಸ್ಥಾನದಲ್ಲಿ ಮಹಿಳೆಯೊಬ್ಬರು ತನ್ನ ಸಹೋದರನಿಗೆ ರಾಖಿ ಕಟ್ಟುತ್ತಿರುವ ಚಿತ್ರ ವೈರಲ್ ಆಗಿದೆ. ಈ ದೃಶ್ಯದ ಕಥೆ ಕೇಳುದರೆ ಕಣ್ಣಂಚಿನಲ್ಲಿ ನೀರು ತುಂಬಿಕೊಳ್ಳುತ್ತವೆ. ದೇಶಕ್ಕಾಗಿ ಪ್ರಾಣ ನೀಡಿದ ಯೋಧರ ಕುಟುಂಬಗಳು ಕಣ್ಣೆದುರು ಹಾದು ಹೋಗುತ್ತವೆ. ಅಷ್ಟಕ್ಕೂ ಈ ಮಹಿಳೆ ರಾಖಿ ಕಟ್ಟುತ್ತಿರುವುದು ಹುತಾತ್ಮರಾದ ಸಹೋದರನ ಪ್ರತಿಮೆಗೆ.
ವೇದಾಂತ್ ಬಿರ್ಲಾ ಅವರು ಲಿಂಕ್ಡ್‌ಇನ್‌ನಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ ಸಹೋದರಿಯೊಬ್ಬರು ತನ್ನ ಸಹೋದರನ ಕೈಗೆ ರಾಖಿ ಕಟ್ಟುತ್ತಿರುವ ಹೃದಯ ವಿದ್ರಾವಕ ಚಿತ್ರವನ್ನು ತೋರಿಸುತ್ತದೆ. ಆದರೆ ಸಹೋದರ ಪ್ರತಿಕ್ರಿಯಿಸುವುದಿಲ್ಲ. ರಾಜಸ್ಥಾನದಲ್ಲಿ ತೆಗೆದ ಈ ಫೋಟೋ ಜಮ್ಮು ಮತ್ತು ಕಾಶ್ಮೀರದಲ್ಲಿ ಶತ್ರುಗಳ ವಿರುದ್ಧ ಹೋರಾಡುವಾಗ ತನ್ನ ಪ್ರಾಣವನ್ನು ಅರ್ಪಿಸಿದ ಶಹೀದ್ ಗಣಪತ್ ರಾಮ್ ಕಡ್ವಾಸ್ ಅವರ ಪ್ರತಿಮೆಯನ್ನು ಹೊಂದಿದೆ. ಇದರಲ್ಲಿ ಅಪರಿಚಿತ ಮಹಿಳೆ ಪ್ರತಿಮೆಗೆ ರಾಖಿ ಕಟ್ಟಿ 'ರಕ್ಷಾ' ಸಾರವನ್ನು ಗೌರವಿಸುವುದನ್ನು ಕಾಣಬಹುದು.
"ಇದು ಭಾರತವನ್ನು ನಂಬಲಾಗದಂತಾಗಿಸಿದೆ. ಇದು ದುಃಖ ಮತ್ತು ಹೆಮ್ಮೆಯ ಕ್ಷಣ. ಸಹೋದರನನ್ನು ಕಳೆದುಕೊಂಡ ದುಃಖದಲ್ಲಿ ಮಹಿಳೆ ಇದ್ದಾಳೆ. ಇದರೊಂದಿಗೆ ದೇಶಕ್ಕಾಗಿ ಅವರು ಸರ್ವೋಚ್ಚ ತ್ಯಾಗ ಮಾಡಿದ ಹೆಮ್ಮೆ. ರಕ್ಷಾ ಬಂಧನದಂದು ಅವಳು ಭಾವನಾತ್ಮಕ ಅಶಾಂತಿಯನ್ನು ಅನುಭವಿಸುತ್ತಿರುವ ಗಳಿಗೆ ಇದು. ಅವಳು ತನ್ನ ಸಹೋದರನಿಗೆ ರಾಖಿ ಕಟ್ಟಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಅವಳು ಅದನ್ನು ಅವನ ಪ್ರತಿಮೆಗೆ ಕಟ್ಟುತ್ತಾಳೆ. ಶಹೀದ್ ಗಣಪತ್ ರಾಮ್ ಕಡ್ವಾಸ್ರಾ ಅವರು ರಾಜಸ್ಥಾನದ ಜೋಧ್‌ಪುರದ ಓಸಿಯಾನ್‌ನ ಖುಡಿಯಾಲಾ ಗ್ರಾಮದವರು. ಅವರು ಜಾಟ್ ರೆಜಿಮೆಂಟ್‌ನಿಂದ ಬಂದವರು. ಅವರು 24.9.2017 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಶತ್ರುಗಳೊಂದಿಗೆ ಹೋರಾಡಿ ಹುತಾತ್ಮರಾದರು," ಎಂದು ಶೀರ್ಷಿಕೆ ವಿವರಿಸಿದರು.

ಪೋಸ್ಟ್‌ಗೆ 3 ಸಾವಿರ ಪ್ರತಿಕ್ರಿಯೆಗಳು ಮತ್ತು ಟನ್‌ಗಳಷ್ಟು ಕಾಮೆಂಟ್‌ಗಳು ಬಂದಿವೆ. ಪೋಸ್ಟ್ ಅನೇಕರ ಹೃದಯವನ್ನು ಮುಟ್ಟಿದೆ. ದೇಶವನ್ನು ಉಳಿಸುವ ಸಲುವಾಗಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಸೇನಾ ಸಿಬ್ಬಂದಿಗೆ ಹಲವಾರು ನೆಟಿಜನ್‌ಗಳು ಕಾಮೆಂಟ್‌ಗಳಲ್ಲಿ ಧನ್ಯವಾದ ಅರ್ಪಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications