• search
  • Live TV
ಜೈಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಚಿನ್ ಪೈಲೆಟ್ ಬಣದ ಇಬ್ಬರು ಶಾಸಕರ ಅಮಾನತು ವಾಪಸ್!

|
Google Oneindia Kannada News

ಜೈಪುರ, ಆಗಸ್ಟ್ 13 : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಸಚಿನ್ ಪೈಲೆಟ್ ಬಣದ ಇಬ್ಬರು ಶಾಸಕರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆದಿದೆ. ಶುಕ್ರವಾರದಿಂದ ರಾಜಸ್ಥಾನ ವಿಧಾನಸಭೆ ಕಲಾಪ ಆರಂಭವಾಗುತ್ತಿದೆ.

ಶಾಸಕರಾದ ಬನ್ವಾರ್‌ ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್‌ರನ್ನು ಪಕ್ಷದಿಂದ ಅಮಾನತುಗೊಳಿಸಿ ಜುಲೈ 17ರಂದು ಅಮಾನತುಗೊಳಿಸಿ ಕಾಂಗ್ರೆಸ್ ಆದೇಶ ಹೊರಡಿಸಿತ್ತು. ವಿಧಾನಸಭೆ ಕಲಾಪ ಆರಭವಾಗುವ ಕೆಲವೇ ಗಂಟೆಗಳ ಮೊದಲು ಅಮಾನತು ಆದೇಶ ವಾಪಸ್ ಪಡೆಯಲಾಗಿದೆ.

ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ ಮತ್ತೆ ಸಂಕಷ್ಟ ತಂದ ಬಿಜೆಪಿ! ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ ಮತ್ತೆ ಸಂಕಷ್ಟ ತಂದ ಬಿಜೆಪಿ!

ಇಬ್ಬರು ಶಾಸಕರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಟೇಪ್ ಬಹಿರಂಗವಾಗಿತ್ತು. ಶಾಸಕರು ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಸಂಚು ರೂಪಿಸಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಅಮಾನತು ಮಾಡಲಾಗಿತ್ತು.

ಜೈಪುರಕ್ಕೆ ಸಚಿನ್ ಪೈಲೆಟ್ ವಾಪಸ್; ಹೇಳಿದ್ದು ಒಂದೇ ಮಾತು! ಜೈಪುರಕ್ಕೆ ಸಚಿನ್ ಪೈಲೆಟ್ ವಾಪಸ್; ಹೇಳಿದ್ದು ಒಂದೇ ಮಾತು!

ಈ ಇಬ್ಬರೂ ಶಾಸಕರು ರಾಜಸ್ಥಾನದ ಉಪ ಮುಖ್ಯಮಂತ್ರಿಯಾಗಿದ್ದ ಸಚಿನ್ ಪೈಲೆಟ್ ಬಣದಲ್ಲಿ ಗುರುತಿಸಿಕೊಂಡಿದ್ದರು. ರಾಜ್ಯ ಕಾಂಗ್ರೆಸ್‌ನಲ್ಲಿನ ಬಿಕ್ಕಟ್ಟು ಈಗ ಬಗೆಹರಿಸಿದೆ. ಆದ್ದರಿಂದ, ಶಾಸಕರ ಅಮಾನತು ಆದೇಶ ವಾಪಸ್ ಆಗಿದೆ.

ಸಚಿನ್, ರಾಹುಲ್ ಗಾಂಧಿ ಭೇಟಿ; ಕಾಂಗ್ರೆಸ್ ಪತ್ರಿಕಾ ಪ್ರಕಟಣೆ ಸಚಿನ್, ರಾಹುಲ್ ಗಾಂಧಿ ಭೇಟಿ; ಕಾಂಗ್ರೆಸ್ ಪತ್ರಿಕಾ ಪ್ರಕಟಣೆ

ಶುಕ್ರವಾರದಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಪ್ರತಿಪಕ್ಷ ಬಿಜೆಪಿ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗುತ್ತದೆ ಎಂದು ಹೇಳಿದೆ. ಅಶೋಕ್ ಗೆಹ್ಲೋಟ್ ಸರ್ಕಾರ ವಿಶ್ವಾಸಮತ ಗೆಲ್ಲಲಿದೆಯೇ? ಕಾದು ನೋಡಬೇಕಿದೆ.

ಜುಲೈನಲ್ಲಿ ಸಚಿನ್ ಪೈಲೆಟ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಎದಿದ್ದರು. ಹೈಕಮಾಂಡ್ ಮಧ್ಯ ಪ್ರವೇಶದ ಬಳಿಕ ಬಂಡಾಯ ತಣ್ಣಗಾಗಿದೆ. ಕಾಂಗ್ರೆಸ್ ಸರ್ಕಾರದ ಜೊತೆ ಮುಂದುವರೆಯುವುದಾಗಿ ಸಚಿನ್ ಪೈಲೆಟ್ ಮತ್ತು ಇತರ 18 ಶಾಸಕರು ತಿಳಿಸಿದ್ದಾರೆ.

English summary
Rajasthan Congress revoked the suspension of Sachin Pilot camp two MLAs. On July 17, 2020 MLA's suspended following allegations that they were involved in a conspiracy to topple the government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X