ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

''ನಾನು ಬಿಜೆಪಿ ಸೇರಲ್ಲ'' ಎಂದ ಸಚಿನ್ ಪೈಲಟ್, ಮುಂದೇನು?

|
Google Oneindia Kannada News

ಜೈಪುರ, ಜುಲೈ 15: ರಾಜಸ್ಥಾನದ ಉಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿರುವ ಬಂಡಾಯ ನಾಯಕ ಸಚಿನ್ ಪೈಲಟ್ ಅವರು ಇಂದು ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಮುಂದಿನ ನಡೆ ಏನು ಎಂಬುದರ ಸುಳಿವು ನೀಡಿಲ್ಲ.

ಬಿಜೆಪಿ ವಿರುದ್ಧ ಪ್ರಚಾರ ನಡೆಸಿ, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲು ಪೈಲಟ್ ನೆರವಾಗಿದ್ದರು. ಆದರೆ, ಸಿಎಂ ಆಗಿ ಅಶೋಕ್ ಗೆಹ್ಲೋಟ್ ಅವರನ್ನು ನೇಮಿಸಲಾಗಿತ್ತು.

Sachin Pilot clears the air, says he is not joining BJP

ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿದ ಅಶೋಕ್ ಗೆಹ್ಲೋಟ್ ಅವರು ಡಿಸಿಎಂ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ತೆಗೆದು ಹಾಕಲಾಗಿದೆ. ಸಚಿವರಾದ ವಿಶ್ವೇಂದರ್ ಸಿಂಗ್ ಹಾಗೂ ರಮೇಶ್ ಮೀನಾ ಅವರನ್ನು ಸಚಿವ ಸ್ಥಾನ ಕೆಳಗಿಳಿಸಲಾಗಿದೆ ಎಂದು ಅಧಿಕೃತವಾಗಿ ರಾಜ್ಯಪಾಲರಿಗೆ ತಿಳಿಸಿದ್ದರು. ಈಗ ಸಚಿನ್ ಪೈಲಟ್ ಸೇರಿದಂತೆ ಬಂಡಾಯವೆದ್ದಿರುವ ಶಾಸಕರು, ಪಕ್ಷದ ಪದಾಧಿಕಾರಿಗಳು ಸೇರಿದಂತೆ 18 ಮಂದೆಗ್ ನೋಟಿಸ್ ನೀಡಲಾಗಿದೆ ಎಂದು ರಾಜಸ್ಥಾನದ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಹೇಳಿದ್ದಾರೆ.

ಗೋವಿಂದ್ ಸಿಂಗ್ ದೊತಾಸ್ರಾ ಅವರು ಸದ್ಯ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿನ್ ಪೈಲಟ್ ಈಗಾಗಲೇ ಕಾಂಗ್ರೆಸ್ ಮುಂದೆ ಬೇಡಿಕೆ ಇಟ್ಟಿದ್ದು, ಮಾತುಕತೆ ನಡೆಸಲು ಕಾಂಗ್ರೆಸ್ ಸದಾಸಿದ್ಧವಿದೆ. ದೇವರು ಸಚಿನ್ ಪೈಲಟ್ ಗೆ ಸರ್ಕಾರ ಉರುಳಿಸದಂತೆ ಬುದ್ಧಿ ನೀಡಲಿ, ಈಗ ಮಾತುಕತೆ ಹಂತವನ್ನು ಮೀರಿದಂತೆ ಕಾಣುತ್ತಿದೆ ಎಂದು ಅವಿನಾಶ್ ಪಾಂಡೆ ಹೇಳಿದ್ದಾರೆ.

English summary
"I am not joining the BJP," Sachin Pilot said on Wednesday, asserting that he had worked hard to defeat the saffron party and bring the Congress back to power in Rajasthan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X