ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು; ರಾಹುಲ್ ಭೇಟಿಗೆ ನಿರಾಕರಿಸಿದ ಸಚಿನ್!

|
Google Oneindia Kannada News

ಜೈಪುರ, ಜುಲೈ 13 : ರಾಜಸ್ಥಾನ ಕಾಂಗ್ರೆಸ್‌ನಲ್ಲಿನ ಬಿಕ್ಕಟ್ಟು ಇನ್ನೂ ಮುಂದುವರೆದಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಅಸಮಾಧಾನಗೊಂಡಿರುವ ಸಚಿನ್ ಪೈಲೆಟ್ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ.

Recommended Video

Steve Jobs , ಹೆತ್ತವರಿಗೆ ಬೇಡವಾಗಿದ್ದ ಕೂಸು , ಜಗತ್ತನ್ನೇ ಗೆದ್ದ ಕಥೆ | Oneindia Kannada

"ನಮ್ಮ ಜೊತೆ ಮಾತನಾಡಿ" ಎಂದು ಸಂದೇಶವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಚಿನ್ ಪೈಲೆಟ್ ಮತ್ತು ಅವರ ಬೆಂಬಲಕ್ಕೆ ನಿಂತಿರುವ ಶಾಸಕರಿಗೆ ರವಾನೆ ಮಾಡಿದ್ದರು. ಅಶೋಕ್ ಗೆಹ್ಲೋಟ್ ಸೋಮವಾರ ಬೆಳಗ್ಗೆ ಶಾಸಕರ ಸಭೆಯನ್ನು ನಡೆಸಿದ್ದರು.

ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಕುತೂಹಲ ಮೂಡಿಸಿದ ಸಚಿನ್ ನಡೆ! ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಕುತೂಹಲ ಮೂಡಿಸಿದ ಸಚಿನ್ ನಡೆ!

'ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಟುವಟಿಕೆ ನಡೆಸುವವರ ವಿರುದ್ಧ ಮತ್ತು ಸರ್ಕಾರವನ್ನು ಪತನಗೊಳಿಸುವ ಷಡ್ಯಂತ್ರ ರೂಪಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಅಶೋಕ್ ಗೆಹ್ಲೋಟ್ ಸಚಿನ್ ಪೈಲೆಟ್‌ಗೆ ನೋಟಿಸ್ ರವಾನೆ ಮಾಡಿದ್ದಾರೆ.

ರಾಜಸ್ಥಾನ, ಸಚಿನ್ ಪೈಲಟ್ ಸಂಚಿಗೆ ಬೇಸ್ತು ಬಿದ್ದ ಗೆಹ್ಲೋಟ್: ಭಾರೀ ಸಂಕಷ್ಟದಲ್ಲಿ ಕಾಂಗ್ರೆಸ್? ರಾಜಸ್ಥಾನ, ಸಚಿನ್ ಪೈಲಟ್ ಸಂಚಿಗೆ ಬೇಸ್ತು ಬಿದ್ದ ಗೆಹ್ಲೋಟ್: ಭಾರೀ ಸಂಕಷ್ಟದಲ್ಲಿ ಕಾಂಗ್ರೆಸ್?

ಶಾಸಕಾಂಗ ಪಕ್ಷದ ಸಭೆ, ಅಶೋಕ್ ಗೆಹ್ಲೋಟ್ ಕಳುಹಿಸಿರುವ ನೋಟಿಸ್ ಬಳಿಕ ಸಚಿನ್ ಪೈಲೆಟ್ ಅಸಮಾಧಾನ ಇನ್ನೂ ಹೆಚ್ಚಾಗಿದೆ. ಎಐಸಿಸಿಯ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಅವರು ನಿರಾಕರಿಸಿದ್ದಾರೆ.

ರಾಜಸ್ಥಾನ ಸಿಎಂ ಆಪ್ತರ ಮನೆ, ಕಚೇರಿ ಮೇಲೆ ಐಟಿ ದಾಳಿರಾಜಸ್ಥಾನ ಸಿಎಂ ಆಪ್ತರ ಮನೆ, ಕಚೇರಿ ಮೇಲೆ ಐಟಿ ದಾಳಿ

ರಣದೀಪ್ ಸಿಂಗ್ ಸುರ್ಜೆವಾಲಾ

ರಣದೀಪ್ ಸಿಂಗ್ ಸುರ್ಜೆವಾಲಾ

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ರಣದೀಪ್ ಸಿಂಗ್ ಸುರ್ಜೆವಾಲಾರನ್ನು ಪರಿಸ್ಥಿತಿ ತಿಳಿಗೊಳಿಸಲು ಜೈಪುರಕ್ಕೆ ಕಳುಹಿಸಿದೆ. "ನಮ್ಮ ಜೊತೆ ಮಾತನಾಡಿ, ಎಲ್ಲಾ ಬಾಗಿಲುಗಳು ತೆರೆದಿವೆ" ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ಕಳುಹಿಸಿದೆ.

96 ಶಾಸಕರು ಪಾಲ್ಗೊಂಡಿದ್ದರು

96 ಶಾಸಕರು ಪಾಲ್ಗೊಂಡಿದ್ದರು

ಸೋಮವಾರ ಬೆಳಗ್ಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಶಾಸಕರ ಸಭೆ ನಡೆಸಿದ್ದರು. ಸಿಎಲ್‌ಪಿ ಸಭೆಯಲ್ಲಿ 96 ಶಾಸಕರು ಪಾಲ್ಗೊಂಡಿದ್ದರು. ಈ ಮೂಲಕ ಸಚಿನ್ ಪೈಲೆಟ್‌ಗೆ ಹೆಚ್ಚು ಶಾಸಕರ ಬೆಂಬಲವಿಲ್ಲ ಎಂಬುದು ಸಾಬೀತಾಗಿದೆ.

30 ಶಾಸಕರ ಬೆಂಬಲವಿದೆ

30 ಶಾಸಕರ ಬೆಂಬಲವಿದೆ

ತಮಗೆ 30 ಶಾಸಕರ ಬೆಂಬಲವಿದೆ ಎಂದು ಬಂಡಾಯ ಎದ್ದಿರುವ ನಾಯಕ ಸಚಿನ್ ಪೈಲೆಟ್ ಹೇಳಿದ್ದಾರೆ. ಆದರೆ, 16ಕ್ಕಿಂತ ಹೆಚ್ಚು ಶಾಸಕರ ಅವರ ಜೊತೆ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಸಚಿನ್ ಪೈಲೆಟ್ ರಾಹುಲ್ ಗಾಂಧಿ ಭೇಟಿಯಾಗಲು ನಿರಾಕರಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಸೇರುವುದಿಲ್ಲ ಎಂದು ಹೇಳಿಕೆ

ಬಿಜೆಪಿ ಸೇರುವುದಿಲ್ಲ ಎಂದು ಹೇಳಿಕೆ

ಸಚಿನ್ ಪೈಲೆಟ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಶನಿವಾರದಿಂದ ಹಬ್ಬಿದ್ದವು. ಆದರೆ, ಈ ಕುರಿತು ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಬಿಜೆಪಿಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಅವರ ಬೇಡಿಕೆ ಏನು? ಎಂಬುದು ಇನ್ನೂ ತಿಳಿದುಬಂದಿಲ್ಲ.

English summary
Crisis in Rajasthan Congress continued after rebel leader Sachin Pilot on Monday denied any meeting with Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X