ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿನ್‌ಗೆ ಸಿಂಧಿಯಾ ಸಿಂಪಥಿ, ಕಮಲ ಪಕ್ಷದತ್ತ ಪೈಲಟ್ ಪಯಣ?

|
Google Oneindia Kannada News

ಜೈಪುರ/ನವದೆಹಲಿ, ಜುಲೈ 13: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಉಲ್ಬಣವಾಗಿದ್ದು, ಬಂಡಾಯವೆದ್ದಿರುವ ಉಪ ಮುಖ್ಯಮಂತ್ರಿ ಸಚಿನ್ ಪೈಲೆಟ್ ಅವರಿಗೆ ಸ್ನೇಹಿತ ಜ್ಯೋತಿರಾದಿತ್ಯ ಸಿಂಧಿಯಾರಿಂದ ಸಿಂಪಥಿ ಸಂದೇಶ ಸಿಕ್ಕಿದೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಸಚಿನ್ ಮತ್ತೆ ರಾಜಸ್ಥಾನಕ್ಕೆ ಹಿಂತಿರುಗುವ ವೇಳೆಗೆ ಪಕ್ಷ ಬದಲಾಯಿಸಿ, ಸಿಎಂ ಗದ್ದುಗೆಯಲ್ಲಿರುತ್ತಾರೆ ಎಂಬ ಮಾತುಗಳು ಕೇಳಿ ಬಂದಿವೆ.

Recommended Video

CPL starts midst Corona | ಕೊರೊನ ನಡುವೆಯೇ ಶುರುವಾಗಲಿದೆ CPL | Oneindia Kannada

ಈ ನಡುವೆ ಮಧ್ಯಪ್ರದೇಶ ಮಾದರಿಯಲ್ಲಿ ರಾಜಸ್ಥಾನದ ಕಾಂಗ್ರೆಸ್ ಸರ್ಕಾರವೂ ಪತನಗೊಳ್ಳಲಿದೆ ಎಂಬ ಮಾಧ್ಯಮಗಳ ವರದಿಗಳನ್ನು ತಳ್ಳಿ ಹಾಕಿರುವ ರಾಜಸ್ಥಾನದ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ, ಪೈಲಟ್ ಜೊತೆ ಮಾತನಾಡಲು ಆಗಿಲ್ಲ, ಪಕ್ಷಕ್ಕಿಂತ ಯಾರು ಹಿರಿಯರಿಲ್ಲ, ಇಂದು ಶಾಸಕಾಂಗ ಸಭೆಗೆ ಹಾಜರಾಗುತ್ತಾರೆ ಎಂಬ ಭರವಸೆ ಇದೆ ಎಂದಿದ್ದಾರೆ.

ರಾಜಸ್ಥಾನ : ಸಚಿನ್ ಪೈಲಟ್ ಅತ್ಯಂತ ಕಿರಿಯ ವಯಸ್ಸಿನ ಡಿಸಿಎಂರಾಜಸ್ಥಾನ : ಸಚಿನ್ ಪೈಲಟ್ ಅತ್ಯಂತ ಕಿರಿಯ ವಯಸ್ಸಿನ ಡಿಸಿಎಂ

"ಸಚಿನ್ ಪೈಲಟ್ ಗೆ ಇಂಥ ಸ್ಥಿತಿ ಬಂದಿರುವುದು ಸರಿಯಲ್ಲ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಂದ ರಾಜಕೀಯವಾಗಿ ಸೈಡ್ ಲೈನ್ ಆಗುತ್ತಿದ್ದಾರೆ. ಸಚಿನ್ ಅವರಿಗಿರುವ ಪ್ರತಿಭೆಗೆ ತಕ್ಕ ಸ್ಥಾನಮಾನವನ್ನು ನೀಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ'' ಎಂಬರ್ಥದಲ್ಲಿ ಸಿಂಧಿಯಾ ಟ್ವೀಟ್ ಮಾಡಿದ್ದಾರೆ.

Sachin Pilot Likely to Join BJP in Presence of Party President JP Nadda Today, Say Reports

ಈ ನಡುವೆ ದೆಹಲಿಯಲ್ಲಿ ಬಿಜೆಪಿ ಹಿರಿಯ ಮುಖಂಡರ ಜೊತೆ ಪೈಲಟ್ ಮಾತುಕತೆ ನಡೆಸಿದ್ದು, ಅಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಸಚಿನ್ ಅವರು 30 ಕ್ಕೂ ಅಧಿಕ ಕಾಂಗ್ರೆಸ್ ಹಾಗೂ ಪಕ್ಷೇತರ ಶಾಸಕರ ಬೆಂಬಲ ಹೊಂದಿದ್ದಾರೆ, ಅಶೋಕ್ ಸರ್ಕಾರವನ್ನು ಉರುಳಿಸುತ್ತಾರೆ ಎಂಬ ಸುದ್ದಿ ಏನಾಗಲಿದೆ ಕಾದು ನೋಡಬೇಕಿದೆ.

ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಕುತೂಹಲ ಮೂಡಿಸಿದ ಸಚಿನ್ ನಡೆ! ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಕುತೂಹಲ ಮೂಡಿಸಿದ ಸಚಿನ್ ನಡೆ!

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಸಭಾ ಚುನಾವಣೆ ಸಮಯದಿಂದಲೂ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಈಗ ಮೂವರು ಪಕ್ಷೇತರ ಶಾಸಕರಿಗೆ 25 ರಿಂದ 30 ಕೋಟಿ ಹಣದ ಆಮಿಷವೊಡ್ಡಿದ್ದಾರೆ ಎಂದು ಆರೋಪ ಮಾಡಲಾಗಿದ್ದು, ಈ ಕುರಿತು ತನಿಖೆ ಆರಂಭವಾಗಿದೆ. ಈ ಪ್ರಕರಣಕ್ಕೂ ಪೈಲಟ್ ಗೂ ನಂಟಿದೆ ಎಂದು ಕೇಳಿ ಬಂದಿದ್ದರಿಂದ ಸಚಿನ್ ಬಂಡಾಯವೆದ್ದಿದ್ದಾರೆ.

English summary
In a big blow to Congress, Deputy Chief Minister of Rajasthan and Congress leader Sachin Pilot is likely to join Bharatiya Janata Party (BJP) on Monday, TV reports have claimed amid the ongoing crisis within the Rajasthan Congress. If reports are to be believed, Pilot is expected to join the BJP in the presence of BJP chief JP Nadda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X