ರಾಜಸ್ಥಾನದ ಮುಂದಿನ ಸಿಎಂ ಯಾರು? ಸಚಿನ್ ಪೈಲಟ್ ಉತ್ತರವೇನು?
Recommended Video

ಜೈಪುರ, ನವೆಂಬರ್ 22: ರಾಜಸ್ಥಾನದಲ್ಲಿ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗುತ್ತಿರುವ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್, 'ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಯಾರು?' ಎಂಬ ಪ್ರಶ್ನೆಗೆ ಜಾಣತನದ ಉತ್ತರ ನೀಡಿದ್ದಾರೆ.
"ರಾಜಸ್ಥಾನದ ಮುಖ್ಯಮಂತ್ರಿ ಅಭ್ಯರ್ಥಿ ನೀವೇ ಅಲ್ಲವೇ?" ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, "ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಈಗೇಕೆ ಪ್ರಶ್ನೆ? ಚುನಾವಣೆ ಮುಗಿದ ಮೇಲೆ ಆ ಪ್ರಶ್ನೆ ಎದ್ದರೆ ಸರಿ" ಎಂದು ಜಾಣ್ಮೆಯ ಉತ್ತರ ನೀಡಿದ್ದಾರೆ.

"ಕಾಂಗ್ರೆಸ್ ನ ರಾಜಸ್ಥಾನೀ ಘಟಕದ ಎಲ್ಲ ಸದಸ್ಯರೂ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಹೋರಾಡುತ್ತಿದ್ದೇವೆ. ನಾವು ಗೆದ್ದು, ಬಹುಮತ ಪಡೆದ ಮೇಲೆ ಶಾಸಕರೇ ತಮ್ಮ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಆಯ್ಕೆ ಮಾಡುತ್ತಾರೆ. ಅದಕ್ಕಿನ್ನೂ ಸಮಯವಿದೆ" ಎಂದು ಪೈಲಟ್ ಹೇಳಿದರು.
ರಾಜಸ್ಥಾನದಲ್ಲಿ ಡಿಸೆಂಬರ್ 7 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. ಪ್ರಸ್ತುತ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ.












Click it and Unblock the Notifications