ಸಚಿನ್ ಪೈಲೆಟ್ ಬೆಂಬಲಿಗರ ರಾಜೀನಾಮೆ ಪರ್ವ ಆರಂಭ!

ಜೈಪುರ, ಜುಲೈ 14 : ರಾಜಸ್ಥಾನ ಕಾಂಗ್ರೆಸ್‌ ಬಿಕ್ಕಟ್ಟಿನಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ಬಗ್ಗೆ ಪ್ರಶ್ನೆ ಎದ್ದಿದೆ. ಸಚಿನ್ ಪೈಲೆಟ್ ಬೆಂಬಲಿಸುವ ನಾಯಕರು ರಾಜೀನಾಮೆ ನೀಡಲು ಆರಂಭಿಸಿದ್ದಾರೆ.

Recommended Video

      PU Results : Udupi ವಿದ್ಯಾರ್ಥಿಗಳಿಗೆ ಅಭಿನಂದನೆಗಳು | Oneindia Kannada

      ಮಂಗಳವಾರ ರಾತ್ರಿ ಸಚಿನ್ ಪೈಲೆಟ್ ಬೆಂಬಲಿಸುವ ಶಾಸಕರು ರಾಜೀನಾಮೆ ನೀಡಲು ಆರಂಭಿಸಿದ್ದಾರೆ. ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಅಲ್ಪ ಮತಕ್ಕೆ ಇಳಿಸಲುಬೇಕಾದಷ್ಟು ಶಾಸಕರು ನಮ್ಮ ಬಳಿ ಇದ್ದಾರೆ ಎಂದು ನಾಯಕರು ಹೇಳಿಕೆ ಕೊಟ್ಟಿದ್ದಾರೆ.

      Sachin Pilot Supporting Congress MLAs Begin Tendering Resignations

      ರಾಜಸ್ಥಾನ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್ ಸಹದೇವ್ ಶರ್ಮಾ, ರಾಜೇಶ್ ಚೌಧರಿ ಇಂದು ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ ಎಷ್ಟು ಶಾಸಕರ ಬೆಂಬಲವಿದೆ? ಎಂಬುದು ಇನ್ನೂ ಖಾತ್ರಿಯಾಗಿಲ್ಲ.

      ಮಂಗಳವಾರ ರಾಜಸ್ಥಾನ ಕಾಂಗ್ರೆಸ್ ಉಪ ಮುಖ್ಯಮಂತ್ರಿಯಾಗಿದ್ದ ಸಚಿನ್ ಪೈಲೆಟ್‌ರನ್ನು ವಜಾಗೊಳಿಸಿತ್ತು. ಬಳಿಕ ಪತ್ರಿಕ್ರಿಯೆ ನೀಡಿದ್ದ ಅವರು, "ಸತ್ಯಕ್ಕೆ ಕಿರುಕುಳ ನೀಡಬಹುದು. ಆದರೆ, ಸೋಲಿಸಲು ಸಾಧ್ಯವಿಲ್ಲ" ಎಂದು ಟ್ವೀಟ್ ಮಾಡಿದ್ದರು.

      ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ 2ನೇ ಸಭೆಗೆ ಬಂಡಾಯ ನಾಯಕ ಸಚಿನ್ ಪೈಲೆಟ್‌ಗೆ ಆಹ್ವಾನ ನೀಡಲಾಗಿತ್ತು. ಅವರು ಸಭೆಗೆ ಗೈರಾಗಿದ್ದರು ಬಳಿಕ ಸಚಿನ್ ಪೈಲೆಟ್‌ರನ್ನು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು.

      ಮತ್ತೊಂದು ಕಡೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಪಾಲರನ್ನು ಭೇಟಿ ಮಾಡಿದ್ದರು. 101 ಶಾಸಕರ ಬಲ ತಮಗೆ ಇದೆ ಎಂಬ ಪತ್ರ ನೀಡಲು 4 ದಿನದ ಕಾಲಾವಕಾಶ ಕೊಡಬೇಕು ಎಂದು ಮನವಿ ಮಾಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+