ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನದಲ್ಲಿ ಸಿಐಪಿಇಟಿ ಉದ್ಘಾಟನೆ ಜೊತೆ 4 ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ

|
Google Oneindia Kannada News

ಜೈಪುರ್, ಸೆಪ್ಟೆಂಬರ್ 30: ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ಸೆಂಟ್ರಲ್ ಇನ್ಸ್ ಟಿಟ್ಯೂಟ್ ಆಫ್ ಪೆಟ್ರೋ ಮೆಟಿಕಲ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯನ್ನು ಬೆಳಗ್ಗೆ 11 ಗಂಟೆ ಸುಮಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

ಇದರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬನ್ಸಾವರ, ಸಿರೋಹಿ, ಹನುಮಾನಘರ್, ದೌಸಾ ಜಿಲ್ಲೆಗಳಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಅಡಿಗಲ್ಲು ಸ್ಥಾಪಿಸಲಿದ್ದಾರೆ. ಈ ವೈದ್ಯಕೀಯ ಕಾಲೇಜುಗಳು ಕೇಂದ್ರೀಯ ಅನುದಾನಿತ ಯೋಜನೆಯಲ್ಲಿ ಮಂಜೂರಾಗಿವೆ. ಈ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಯು ಜಿಲ್ಲಾ ಅಥವಾ ಉಲ್ಲೇಖಿತ ಆಸ್ಪತ್ರೆಗಳೊಂದಿಗೆ ಜೊತೆಯಾಗಿ ಕಾರ್ಯ ನಿರ್ವಹಿಸಲಿವೆ ಎಂದು ಪ್ರಧಾನಮಂತ್ರಿ ಮಾಧ್ಯಮ ಪ್ರಕಟಣೆ ತಿಳಿಸಿದೆ.

Fact Check: ನ್ಯೂಯಾರ್ಕ್ ಟೈಮ್ಸ್‌ ಮುಖಪುಟದಲ್ಲಿ ಮೋದಿ ಬಗ್ಗೆ ವರದಿ ಮಾಡಿಲ್ಲFact Check: ನ್ಯೂಯಾರ್ಕ್ ಟೈಮ್ಸ್‌ ಮುಖಪುಟದಲ್ಲಿ ಮೋದಿ ಬಗ್ಗೆ ವರದಿ ಮಾಡಿಲ್ಲ

ಹಿಂದುಳಿತ ಜಿಲ್ಲೆಗಳಲ್ಲಿ ವೈದ್ಯಕೀಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯ ಆದ್ಯತೆ ಮೇರೆಗೆ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಅನುದಾನದಡಿ ಮೂರು ಹಂತಗಳಲ್ಲಿ ಒಟ್ಟು 157 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Today PM Modi to inaugurate Central institute of petrochemicals technology in Rajasthan

ಪ್ರಧಾನಮಂತ್ರಿ ಮೋದಿ ಟ್ವೀಟ್ ಸಂದೇಶ:

"ಗುಣಮಟ್ಟದ ಶಿಕ್ಷಣ ಒದಗಿಸುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಬೆಳಗ್ಗೆ 11 ಗಂಟೆಗೆ ಜೈಪುರದಲ್ಲಿ ಸಿಐಪಿಇಟಿ: ಇನ್ಸ್ ಟಿಟ್ಯೂಟ್ ಆಫ್ ಪೆಟ್ರೋ ಕೆಮಿಕಲ್ ಟೆಕ್ನಾಲಜಿ ಉದ್ಘಾಟನೆ ಆಗಲಿದೆ. ಈ ವೈದ್ಯಕೀಯ ಸಂಸ್ಥೆಯು ಪೆಟ್ರೋ ಕೆಮಿಕಲ್ ಹಾಗೂ ಎನರ್ಜಿ ಸೆಕ್ಟರ್ ನಲ್ಲಿ ವ್ಯಾಸಂಗ ಮಾಡಲು ಬಯಸುವ ಯುವಕರಿಗೆ ಪೂರಕವಾಗಿ ಶಿಕ್ಷಣ ಒದಗಿಸಲಿದೆ," ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಮೆಡಿಕಲ್ ಕಾಲೇಜು ಉದ್ಘಾಟನೆ ಹಾಗೂ ವಿವಿಧ ವೈದ್ಯಕೀಯ ಕಾಲೇಜುಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಉಪಸ್ಥಿತಿ ವಹಿಸಲಿದ್ದಾರೆ.

English summary
Today PM Modi to inaugurate Central institute of petrochemicals Engineering and technology, lay foundation stone of 4 medical colleges in Rajasthan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X