ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ತಿರುವು; ಸ್ಪೀಕರ್ ಅರ್ಜಿ ವಾಪಸ್
ಜೈಪುರ, ಜುಲೈ 27 : ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ಮಹತ್ವದ ತಿರುವು ಸಿಕ್ಕಿದೆ. ವಿಧಾನಸಭೆ ಸ್ಪೀಕರ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಸಚಿನ್ ಪೈಲೆಟ್ ಸೇರಿದಂತೆ 19 ಶಾಸಕರ ಅನರ್ಹತೆ ವಿಚಾರ ಮುಂದೇನಾಗಲಿದೆ? ಎಂಬುದು ಕುತೂಹಲ ಮೂಡಿಸಿದೆ.
Recommended Video
ಕಾಂಗ್ರೆಸ್ ಬಂಡಾಯ ಶಾಸಕರನ್ನು ಅನರ್ಹಗೊಳಿಸಲು ನೀಡಿದ ನೋಟಿಸ್ ಕುರಿತು ಯಾವುದೇ ಕ್ರಮ ಕೈಗೊಳ್ಳದಂತೆ ರಾಜಸ್ಥಾನ ಹೈಕೋರ್ಟ್ ಸ್ಪೀಕರ್‌ಗೆ ಸೂಚನೆ ನೀಡಿತ್ತು. ಹೈಕೋರ್ಟ್ ಆದೇಶವನ್ನು ಸ್ಪೀಕರ್ ಸಿ. ಪಿ. ಜೋಶಿ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಗುರುವಾರ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿತ್ತು. ಆದರೆ, ಇಂದು ಬೆಳಗ್ಗೆ ನ್ಯಾಯಾಲಯದ ಕಲಾಪ ಆರಂಭವಾದಾಗ ಸ್ಪೀಕರ್ ಪರ ವಕೀಲ ಕಪಿಲ್ ಸಿಬಲ್ ಅರ್ಜಿಯನ್ನು ವಾಪಸ್ ಪಡೆದರು.
ಅನರ್ಹಗೊಳಿಸಲು ನೋಟಿಸ್ ನೀಡಿದ್ದನ್ನು ಶಾಸಕರು ರಾಜಸ್ಥಾನ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯಾ ಶುಕ್ರವಾರ ತೀರ್ಪು ನೀಡಿತ್ತು. ಸ್ಪೀಕರ್ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಆದೇಶ ನೀಡಿತ್ತು.

ಸುಪ್ರೀಂಕೋರ್ಟ್ ಸಹ ತಡೆ ನೀಡಿತ್ತು
ಸ್ಪೀಕರ್ ಸಿ. ಪಿ. ಜೋಶಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮುಂದಿನ ಆದೇಶದ ತನಕ ಅನರ್ಹತೆ ನೋಟಿಸ್ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸೂಚನೆ ನೀಡಿತ್ತು. ಸೋಮವಾರ ನ್ಯಾಯಾಲಯ ತೀರ್ಪು ನೀಡಲಿದೆ.

ಹೈಕೋರ್ಟ್ ವಿಚಾರಣೆಗೆ ತಡೆ ಇಲ್ಲ
ಸ್ಪೀಕರ್ ಸಿ. ಪಿ. ಜೋಶಿ ರಾಜಸ್ಥಾನ ಹೈಕೋರ್ಟ್‌ನಲ್ಲಿ ಅನರ್ಹತೆ ನೋಟಿಸ್ ಕುರಿತು ನಡೆಯುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು. ಆದರೆ, ವಿಚಾರಣೆಗೆ ತಡೆ ನೀಡಲು ಕೋರ್ಟ್ ನಿರಾಕರಿಸಿತ್ತು.

ಹೈಕೋರ್ಟ್ ಆದೇಶ ಪ್ರಕಟ
ಸ್ಪೀಕರ್ ನೀಡಿದ್ದ ನೋಟಿಸ್ ಪ್ರಶ್ನಿಸಿ ಸಚಿನ್ ಪೈಲೆಟ್ ಸೇರಿದಂತೆ 19 ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ರಾಜಸ್ಥಾನ ಹೈಕೋರ್ಟ್ ಶುಕ್ರವಾರ ತೀರ್ಪನ್ನು ಪ್ರಕಟಿಸಿತ್ತು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಆದೇಶ ನೀಡಿತ್ತು.

ವಿಧಾನಸಭೆ ಅಧಿವೇಶನ ಕರೆಯಿರಿ
ಮತ್ತೊಂದು ಕಡೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಧಾನಸಭೆ ಅಧಿವೇಶನವನ್ನು ಜುಲೈ 31ರಂದು ಕರೆಯಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ನಡುವಿನ ಅಸಮಾಧಾನದ ಕಿಚ್ಚು ರಾಜ್ಯ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಸೃಷ್ಟಿ ಮಾಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications