ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ತಿರುವು; ಸ್ಪೀಕರ್ ಅರ್ಜಿ ವಾಪಸ್

|
Google Oneindia Kannada News

ಜೈಪುರ, ಜುಲೈ 27 : ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ಮಹತ್ವದ ತಿರುವು ಸಿಕ್ಕಿದೆ. ವಿಧಾನಸಭೆ ಸ್ಪೀಕರ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಸಚಿನ್ ಪೈಲೆಟ್ ಸೇರಿದಂತೆ 19 ಶಾಸಕರ ಅನರ್ಹತೆ ವಿಚಾರ ಮುಂದೇನಾಗಲಿದೆ? ಎಂಬುದು ಕುತೂಹಲ ಮೂಡಿಸಿದೆ.

Recommended Video

IPL 2020 Dubai : ದುಬೈ ಆತಿಥ್ಯವನ್ನು ಒಪ್ಪಿಕೊಂಡ ಭಾರತ | Oneindia Kannada

ಕಾಂಗ್ರೆಸ್ ಬಂಡಾಯ ಶಾಸಕರನ್ನು ಅನರ್ಹಗೊಳಿಸಲು ನೀಡಿದ ನೋಟಿಸ್ ಕುರಿತು ಯಾವುದೇ ಕ್ರಮ ಕೈಗೊಳ್ಳದಂತೆ ರಾಜಸ್ಥಾನ ಹೈಕೋರ್ಟ್ ಸ್ಪೀಕರ್‌ಗೆ ಸೂಚನೆ ನೀಡಿತ್ತು. ಹೈಕೋರ್ಟ್ ಆದೇಶವನ್ನು ಸ್ಪೀಕರ್ ಸಿ. ಪಿ. ಜೋಶಿ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಅಧಿವೇಶನ ನಡೆಸಿ; ರಾಜ್ಯಪಾಲರಿಗೆ ಅಶೋಕ್ ಗೆಹ್ಲೋಟ್ ಮನವಿ! ಅಧಿವೇಶನ ನಡೆಸಿ; ರಾಜ್ಯಪಾಲರಿಗೆ ಅಶೋಕ್ ಗೆಹ್ಲೋಟ್ ಮನವಿ!

ಗುರುವಾರ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿತ್ತು. ಆದರೆ, ಇಂದು ಬೆಳಗ್ಗೆ ನ್ಯಾಯಾಲಯದ ಕಲಾಪ ಆರಂಭವಾದಾಗ ಸ್ಪೀಕರ್ ಪರ ವಕೀಲ ಕಪಿಲ್ ಸಿಬಲ್ ಅರ್ಜಿಯನ್ನು ವಾಪಸ್ ಪಡೆದರು.

ಸಚಿನ್ ಪೈಲೆಟ್ ಅನರ್ಹತೆ ಪ್ರಕರಣ; ಹೈಕೋರ್ಟ್ ತೀರ್ಪು ಪ್ರಕಟ ಸಚಿನ್ ಪೈಲೆಟ್ ಅನರ್ಹತೆ ಪ್ರಕರಣ; ಹೈಕೋರ್ಟ್ ತೀರ್ಪು ಪ್ರಕಟ

ಅನರ್ಹಗೊಳಿಸಲು ನೋಟಿಸ್ ನೀಡಿದ್ದನ್ನು ಶಾಸಕರು ರಾಜಸ್ಥಾನ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯಾ ಶುಕ್ರವಾರ ತೀರ್ಪು ನೀಡಿತ್ತು. ಸ್ಪೀಕರ್ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಆದೇಶ ನೀಡಿತ್ತು.

ಸಚಿನ್ ಪೈಲೆಟ್ ಅನರ್ಹತೆ; ಸೋಮವಾರ ಸುಪ್ರೀಂ ಕೋರ್ಟ್ ತೀರ್ಪು ಸಚಿನ್ ಪೈಲೆಟ್ ಅನರ್ಹತೆ; ಸೋಮವಾರ ಸುಪ್ರೀಂ ಕೋರ್ಟ್ ತೀರ್ಪು

ಸುಪ್ರೀಂಕೋರ್ಟ್ ಸಹ ತಡೆ ನೀಡಿತ್ತು

ಸುಪ್ರೀಂಕೋರ್ಟ್ ಸಹ ತಡೆ ನೀಡಿತ್ತು

ಸ್ಪೀಕರ್ ಸಿ. ಪಿ. ಜೋಶಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮುಂದಿನ ಆದೇಶದ ತನಕ ಅನರ್ಹತೆ ನೋಟಿಸ್ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸೂಚನೆ ನೀಡಿತ್ತು. ಸೋಮವಾರ ನ್ಯಾಯಾಲಯ ತೀರ್ಪು ನೀಡಲಿದೆ.

ಹೈಕೋರ್ಟ್ ವಿಚಾರಣೆಗೆ ತಡೆ ಇಲ್ಲ

ಹೈಕೋರ್ಟ್ ವಿಚಾರಣೆಗೆ ತಡೆ ಇಲ್ಲ

ಸ್ಪೀಕರ್ ಸಿ. ಪಿ. ಜೋಶಿ ರಾಜಸ್ಥಾನ ಹೈಕೋರ್ಟ್‌ನಲ್ಲಿ ಅನರ್ಹತೆ ನೋಟಿಸ್ ಕುರಿತು ನಡೆಯುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು. ಆದರೆ, ವಿಚಾರಣೆಗೆ ತಡೆ ನೀಡಲು ಕೋರ್ಟ್ ನಿರಾಕರಿಸಿತ್ತು.

ಹೈಕೋರ್ಟ್ ಆದೇಶ ಪ್ರಕಟ

ಹೈಕೋರ್ಟ್ ಆದೇಶ ಪ್ರಕಟ

ಸ್ಪೀಕರ್ ನೀಡಿದ್ದ ನೋಟಿಸ್ ಪ್ರಶ್ನಿಸಿ ಸಚಿನ್ ಪೈಲೆಟ್ ಸೇರಿದಂತೆ 19 ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ರಾಜಸ್ಥಾನ ಹೈಕೋರ್ಟ್ ಶುಕ್ರವಾರ ತೀರ್ಪನ್ನು ಪ್ರಕಟಿಸಿತ್ತು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಆದೇಶ ನೀಡಿತ್ತು.

ವಿಧಾನಸಭೆ ಅಧಿವೇಶನ ಕರೆಯಿರಿ

ವಿಧಾನಸಭೆ ಅಧಿವೇಶನ ಕರೆಯಿರಿ

ಮತ್ತೊಂದು ಕಡೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಧಾನಸಭೆ ಅಧಿವೇಶನವನ್ನು ಜುಲೈ 31ರಂದು ಕರೆಯಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ನಡುವಿನ ಅಸಮಾಧಾನದ ಕಿಚ್ಚು ರಾಜ್ಯ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಸೃಷ್ಟಿ ಮಾಡಿದೆ.

English summary
In a twist to Rajasthan Congress crisis speaker C. P. Joshi withdraws his plea in Supreme Court. He moved top court against the high court order asking him to defer his decision on disqualification notices issued to Sachin Pilot and 18 other MLAs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X