ಉದಯಪುರ ಟೈಲರ್ ಹತ್ಯೆ: 32 ಹಿರಿಯ ಪೊಲೀಸರ ವರ್ಗಾವಣೆ
ಉದಯಪುರ ಜು. 1: ರಾಜಸ್ಥಾನದ ಟೈಲರ್ ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ಹಿನ್ನೆಲೆಯಲ್ಲಿ ಉದಯಪುರದ ಇನ್ಸ್‌ಪೆಕ್ಟರ್ ಜನರಲ್ ಮತ್ತು ಪೊಲೀಸ್ ಸೂಪರಿಂಟೆಂಡೆಂಟ್ ಸೇರಿದಂತೆ ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) 32 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ವಕ್ತಾರರಾಗಿದ್ದ ನೂಪುರ್ ಶರ್ಮಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಂಡಿತ್ತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದರೂ ಬಿಜೆಪಿ ನೂಪುರ್ ಶರ್ಮಾ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಇದರಿಂದ ರಾಜ್ಯದ ಹಲವೆಡೆ ಈ ವಿಚಾರ ಬೂದಿಮುಚ್ಚಿದ ಕೆಂಡದಂತಿದೆ. ಇದರ ನಡುವೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಬೆದರಿಕೆಯ ಕುರಿತು ದೂರು ನೀಡಿದ ನಂತರ 48 ವರ್ಷದ ಟೈಲರ್ ಕನ್ಹಯ್ಯಾ ಲಾಲ್ ಅವರಿಗೆ ಭದ್ರತೆಯನ್ನು ಒದಗಿಸದಿದ್ದಕ್ಕಾಗಿ ಉದಯಪುರ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಬಳಿಕ ಟೈಲರ್ ಕನ್ಹಯ್ಯಾ ಲಾಲ್ ಅವರನ್ನು ಹತ್ಯೆ ಮಾಡಲಾಗಿದೆ. ಈ ಹತ್ಯೆಯ ವಿಡಿಯೋವನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಪ್ರಧಾನಿ ಮೋದಿ ಅವರಿಗೂ ವಿಡಿಯೋದಲ್ಲಿ ಬೆದರಿಕೆ ಹಾಕಲಾಗಿದೆ. ಹತ್ಯೆಯನ್ನು ಚಿತ್ರೀಕರಿಸಿದ ಇಬ್ಬರು ಹಂತಕರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರಿಯಾಜ್ ಅಖ್ತರಿ ಮತ್ತು ಘೌಸ್ ಮೊಹಮ್ಮದ್ ವಿಡಿಯೊವನ್ನು ಹಾಕಿದ್ದರು.

ಕೊಲೆ ಮಾಡಿ ಹಾಗೂ ವಿಡಿಯೋ ಮಾಡಿದ ಇವರಿಬ್ಬರೊಂದಿಗೆ ಒಟ್ಟು ಐವರನ್ನು ಬಂಧಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯವು ಈ ಸೂಕ್ಷ್ಮ ಪ್ರಕರಣದ ತನಿಖೆಯನ್ನು ದೇಶದ ಉನ್ನತ ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಹಸ್ತಾಂತರಿಸಿದೆ.
ಟೈಲರ್ ಹತ್ಯೆಯು ಯೋಜಿತ ಭಯೋತ್ಪಾದಕ ಕೃತ್ಯವಾಗಿದ್ದು, ಹೆಚ್ಚಿನ ಜನರು ಭಾಗಿಯಾಗಿದ್ದಾರೆ. "ಪ್ರಮುಖ ಆರೋಪಿಗಳು ಪಾಕಿಸ್ತಾನ ಮೂಲದ ಗುಂಪು ದಾವತ್-ಎ-ಇಸ್ಲಾಮಿ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದರು. ಅವರಲ್ಲಿ ಒಬ್ಬರು 2014 ರಲ್ಲಿ ಪಾಕಿಸ್ತಾನದ ಕರಾಚಿಗೆ ಸಂಘಟನೆಯನ್ನು ಭೇಟಿಯಾಗಲು ಹೋಗಿದ್ದರು. ನಾವು ಇದನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸುತ್ತಿದ್ದೇವೆ. ಘಟನೆಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳದಿದ್ದಕ್ಕಾಗಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ" ಎಂದು ರಾಜಸ್ಥಾನ ಪೊಲೀಸ್ ಮುಖ್ಯಸ್ಥ ಎಂಎಲ್ ಲಾಥರ್ ಹೇಳಿದ್ದಾರೆ.

ನಿನ್ನೆ ಭಾರಿ ಭದ್ರತೆಯ ನಡುವೆ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜೊತೆಗೆ ಉದಯ್‌ಪುರ ನ್ಯಾಯಾಲಯದ ಆವರಣದಲ್ಲಿ ಜನಸಮೂಹ ಇಬ್ಬರ ವಿರುದ್ಧ ಘೋಷಣೆಗಳನ್ನು ಕೂಗಿದೆ. ಭೀಕರ ಅಪರಾಧದ ಹಿನ್ನೆಲೆಯಲ್ಲಿ ವಿಧಿಸಲಾದ ಕರ್ಫ್ಯೂ ಮುಂದುವರೆದಿರುವ ಕಾರಣ ಉದಯ್‌ಪುರವು ಅಲರ್ಟ್‌ನಲ್ಲಿದೆ. ಭಗವಾನ್ ಜಗನ್ನಾಥನ ಭಕ್ತರಿಂದ ಧಾರ್ಮಿಕ ಮೆರವಣಿಗೆಯನ್ನು ಇಂದು ಹೊರತರಲಾಗುವುದು ಮತ್ತು ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಭಾರೀ ಬಲವನ್ನು ನಿಯೋಜಿಸಲಾಗಿದೆ.
Recommended Video
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications