ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉದಯಪುರ ಟೈಲರ್ ಹತ್ಯೆ: 32 ಹಿರಿಯ ಪೊಲೀಸರ ವರ್ಗಾವಣೆ

|
Google Oneindia Kannada News

ಉದಯಪುರ ಜು. 1: ರಾಜಸ್ಥಾನದ ಟೈಲರ್ ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ಹಿನ್ನೆಲೆಯಲ್ಲಿ ಉದಯಪುರದ ಇನ್ಸ್‌ಪೆಕ್ಟರ್ ಜನರಲ್ ಮತ್ತು ಪೊಲೀಸ್ ಸೂಪರಿಂಟೆಂಡೆಂಟ್ ಸೇರಿದಂತೆ ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) 32 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ವಕ್ತಾರರಾಗಿದ್ದ ನೂಪುರ್ ಶರ್ಮಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಂಡಿತ್ತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದರೂ ಬಿಜೆಪಿ ನೂಪುರ್ ಶರ್ಮಾ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಇದರಿಂದ ರಾಜ್ಯದ ಹಲವೆಡೆ ಈ ವಿಚಾರ ಬೂದಿಮುಚ್ಚಿದ ಕೆಂಡದಂತಿದೆ. ಇದರ ನಡುವೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಬೆದರಿಕೆಯ ಕುರಿತು ದೂರು ನೀಡಿದ ನಂತರ 48 ವರ್ಷದ ಟೈಲರ್ ಕನ್ಹಯ್ಯಾ ಲಾಲ್ ಅವರಿಗೆ ಭದ್ರತೆಯನ್ನು ಒದಗಿಸದಿದ್ದಕ್ಕಾಗಿ ಉದಯಪುರ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಬಳಿಕ ಟೈಲರ್ ಕನ್ಹಯ್ಯಾ ಲಾಲ್ ಅವರನ್ನು ಹತ್ಯೆ ಮಾಡಲಾಗಿದೆ. ಈ ಹತ್ಯೆಯ ವಿಡಿಯೋವನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಪ್ರಧಾನಿ ಮೋದಿ ಅವರಿಗೂ ವಿಡಿಯೋದಲ್ಲಿ ಬೆದರಿಕೆ ಹಾಕಲಾಗಿದೆ. ಹತ್ಯೆಯನ್ನು ಚಿತ್ರೀಕರಿಸಿದ ಇಬ್ಬರು ಹಂತಕರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರಿಯಾಜ್ ಅಖ್ತರಿ ಮತ್ತು ಘೌಸ್ ಮೊಹಮ್ಮದ್ ವಿಡಿಯೊವನ್ನು ಹಾಕಿದ್ದರು.

Udaipur Case: 32 Senior Cops Transferred Amid Police Criticism

ಕೊಲೆ ಮಾಡಿ ಹಾಗೂ ವಿಡಿಯೋ ಮಾಡಿದ ಇವರಿಬ್ಬರೊಂದಿಗೆ ಒಟ್ಟು ಐವರನ್ನು ಬಂಧಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯವು ಈ ಸೂಕ್ಷ್ಮ ಪ್ರಕರಣದ ತನಿಖೆಯನ್ನು ದೇಶದ ಉನ್ನತ ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಹಸ್ತಾಂತರಿಸಿದೆ.

ಟೈಲರ್ ಹತ್ಯೆಯು ಯೋಜಿತ ಭಯೋತ್ಪಾದಕ ಕೃತ್ಯವಾಗಿದ್ದು, ಹೆಚ್ಚಿನ ಜನರು ಭಾಗಿಯಾಗಿದ್ದಾರೆ. "ಪ್ರಮುಖ ಆರೋಪಿಗಳು ಪಾಕಿಸ್ತಾನ ಮೂಲದ ಗುಂಪು ದಾವತ್-ಎ-ಇಸ್ಲಾಮಿ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದರು. ಅವರಲ್ಲಿ ಒಬ್ಬರು 2014 ರಲ್ಲಿ ಪಾಕಿಸ್ತಾನದ ಕರಾಚಿಗೆ ಸಂಘಟನೆಯನ್ನು ಭೇಟಿಯಾಗಲು ಹೋಗಿದ್ದರು. ನಾವು ಇದನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸುತ್ತಿದ್ದೇವೆ. ಘಟನೆಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳದಿದ್ದಕ್ಕಾಗಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ" ಎಂದು ರಾಜಸ್ಥಾನ ಪೊಲೀಸ್ ಮುಖ್ಯಸ್ಥ ಎಂಎಲ್ ಲಾಥರ್ ಹೇಳಿದ್ದಾರೆ.

Udaipur Case: 32 Senior Cops Transferred Amid Police Criticism

ನಿನ್ನೆ ಭಾರಿ ಭದ್ರತೆಯ ನಡುವೆ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜೊತೆಗೆ ಉದಯ್‌ಪುರ ನ್ಯಾಯಾಲಯದ ಆವರಣದಲ್ಲಿ ಜನಸಮೂಹ ಇಬ್ಬರ ವಿರುದ್ಧ ಘೋಷಣೆಗಳನ್ನು ಕೂಗಿದೆ. ಭೀಕರ ಅಪರಾಧದ ಹಿನ್ನೆಲೆಯಲ್ಲಿ ವಿಧಿಸಲಾದ ಕರ್ಫ್ಯೂ ಮುಂದುವರೆದಿರುವ ಕಾರಣ ಉದಯ್‌ಪುರವು ಅಲರ್ಟ್‌ನಲ್ಲಿದೆ. ಭಗವಾನ್ ಜಗನ್ನಾಥನ ಭಕ್ತರಿಂದ ಧಾರ್ಮಿಕ ಮೆರವಣಿಗೆಯನ್ನು ಇಂದು ಹೊರತರಲಾಗುವುದು ಮತ್ತು ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಭಾರೀ ಬಲವನ್ನು ನಿಯೋಜಿಸಲಾಗಿದೆ.

Recommended Video

July 1 ರಿಂದ‌ ಪ್ಲಾಸ್ಟಿಕ್ ಬ್ಯಾನ್: ಯಾವ್ಯಾವ ಪ್ಲಾಸ್ಟಿಕ್‌ ವಸ್ತುಗಳಿಗೆ‌ ನಿಷೇಧ? | *India | OneIndia Kannada

English summary
Udaipur Tailor Murder: As many as 32 officers of the Indian Police Service (IPS), including the Inspector General and Police Superintendent Of Udaipur, have been transferred in the wake of the gruesome murder of tailor Kanhaiya Lal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X