ರಾಜಸ್ಥಾನ ಬಿಕ್ಕಟ್ಟು; ವಸುಂಧರಾ ರಾಜೇ ನೇತೃತ್ವದಲ್ಲಿ ಬಿಜೆಪಿ ಸಭೆ

ಜೈಪುರ, ಜುಲೈ 14 : ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನಲೆಯಲ್ಲಿ ರಾಜ್ಯದ ರಾಜಕಾರಣ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಬುಧವಾರ ಮಹತ್ವದ ಸಭೆಯನ್ನು ನಡೆಸಲಿದ್ದು, ಸಭೆ ಕುತೂಹಲಕ್ಕೆ ಕಾರಣವಾಗಿದೆ.

Recommended Video

      PU Results : Udupi ವಿದ್ಯಾರ್ಥಿಗಳಿಗೆ ಅಭಿನಂದನೆಗಳು | Oneindia Kannada

      ಬುಧವಾರ ನಡೆಯುವ ಬಿಜೆಪಿ ಶಾಸಕರ ಸಭೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಪಾಲ್ಗೊಳ್ಳಲಿದ್ದಾರೆ. ಬುಧವಾರ ಬೆಳಗ್ಗೆ 11ಗಂಟೆಗೆ ಜೈಪುರದಲ್ಲಿ ಈ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ರಾಷ್ಟ್ರೀಯ ಸುದ್ದಿವಾಹಿನಿಗೆ ತಿಳಿಸಿವೆ.

      ಕಾಂಗ್ರೆಸ್ ಪಕ್ಷದಲ್ಲಿನ ಬಿಕ್ಕಟ್ಟನ್ನು ರಾಜ್ಯದ ಪ್ರತಿಪಕ್ಷವಾದ ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಎದ್ದಿದ್ದ ಸಚಿನ್ ಪೈಲೆಟ್‌ ಅವರನ್ನು ಉಪ ಮುಖ್ಯಮಂತ್ರಿ, ರಾಜ್ಯಾಧ್ಯಕ್ಷ ಸ್ಥಾನಗಿಂದ ಕಾಂಗ್ರೆಸ್ ಅಮಾನತುಗೊಳಿಸಿದೆ.

      Vasundhara Raje to attend key BJP meet in Jaipur

      ಬಿಜೆಪಿ ಹೈಕಮಾಂಡ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಓಂ ಮಥುರ್ ಅವರನ್ನು ಜೈಪುರಕ್ಕೆ ಕಳಿಸಿದೆ. ಬುಧವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ಅವರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನ ಕುತೂಹಲ ಮೂಡಿಸಿದೆ.

      ರಾಜಸ್ಥಾನ ಸರ್ಕಾರಕ್ಕೆ ಬಹುಮತವಿದೆ ಎಂದು ಸಾಬೀತು ಮಾಡಲು ವಿಶ್ವಾಸಮತ ಯಾಚನೆ ಮಾಡುವುದು ಅನಿವಾರ್ಯವಾಗಿದೆ ಎಂದು ಬಿಜೆಪಿ ಹೇಳಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಪಾಲ ಕಲರಾಜ್ ಮಿಶ್ರಾರನ್ನು ಇಂದು ಭೇಟಿ ಮಾಡಿದ್ದರು.

      ಕಾಂಗ್ರೆಸ್ ಸರ್ಕಾರಕ್ಕೆ 106 ಶಾಸಕರ ಬಲವಿದೆ ಎಂದು ಸೋಮವಾರ ಹೇಳಿತ್ತು. ಆದರೆ, ಮಂಗಳವಾರ ಮೂವರು ಶಾಸಕರು ಗೆಹ್ಲೋಟ್ ಬಣದಿಂದ ನಿರ್ಗಮಿಸಿದ್ದಾರೆ. ಸರ್ಕಾರಕ್ಕೆ ಎಷ್ಟು ಶಾಸಕರ ಬೆಂಬಲವಿದೆ? ಎಂಬುದು ಇನ್ನೂ ಖಚಿತವಾಗಿಲ್ಲ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+