ರಾಜ್ಯದ ಮಹಾನಗರ ಪಾಲಿಕೆಗಳಿಗೆ ಉಚಿತ ವೈ-ಫೈ ಸೇವೆ

By: ಕಲಬುರಗಿ ಪ್ರತಿನಿಧಿ
Subscribe to Oneindia Kannada

ಕಲಬುರಗಿ, ಫೆಬ್ರವರಿ 14: ಕೆಲವೇ ದಿನಗಳಲ್ಲಿ ರಾಜ್ಯದ 11 ಮಹಾನಗರ ಪಾಲಿಕೆಗಳಿಗೆ ಹಾಟ್ ಸ್ಪಾಟ್ ವ್ಯವಸ್ಥೆ ಕಲ್ಪಿಸಲಾಗುವುದು ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮೈಸೂರು : ನಗರ ಸಾರಿಗೆ ಬಸ್ಸುಗಳಲ್ಲಿ ಉಚಿತ ವೈ-ಫೈ ಸೇವೆ

ಕಲಬುರಗಿಯ ಮಹಾನಗರ ಪಾಲಿಕೆಯಲ್ಲಿ ಪ್ರಾಯೋಗಿಕ ಹಾಟ್‌ ಸ್ಪಾಟ್‌ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು ಏಪ್ರಿಲ್ ಅಂತ್ಯದವರೆಗೆ ರಾಜ್ಯಾದ್ಯಂತ 11 ಸಾವಿರ ಕಡೆ, ಬೆಂಗಳೂರು ನಲ್ಲಿ 5,000 ಕಡೆ ವೈಫೈ ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದರು.

11 Metropolitan corporation to get free Wi-Fi soon

ಕಲಬುರಗಿ ಮಹಾನಗರ ಪಾಲಿಕೆ ಅಡಿಯಲ್ಲಿ 30 ಕಡೆ ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಮೊದಲು ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು ರಾಜ್ಯದ 2500 ಗ್ರಾಪಂಗಳ ಪೈಕಿ 1000 ಗ್ರಾಪಂ ಗಳಲ್ಲಿ ಸೈಬರ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಉಳಿದವುಗಳಿಗೆ ಆದ್ಯತೆ ಮೇರೆಗೆ ಈ ವ್ಯವಸ್ಥೆ ಸಲ್ಲಿಸಲಾಗುವುದು ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka IT BT minister Priyank Kharge said 11 metropolitan corporations will get free Wi-Fi soon. Experimental Hot Spot System is imposed in Kalaburagi city corporation area.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ