ಕಲಬುರಗಿ: KSRTC ಬಸ್ ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ

Posted By: ಕಲಬುರಗಿ ಪ್ರತಿನಿಧಿ
Subscribe to Oneindia Kannada

ಕಲಬುರಗಿ, ಜನವರಿ 03: ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಬಳಿ ಬುಧವಾರ ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಕೋಡ್ಲಾ ಗ್ರಾಮದ ಅಂಬರೀಶ್ (23), ಸಿದ್ದಪ್ಪಾ (17) ಮೃತ ದುರ್ದೈವಿಗಳು. ಇಬ್ಬರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೇ ಬಸ್ ನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

2 bike riders killed after bike rams into KSRTC bus in Kodla village Sedam

ಘಟನೆ ಖಂಡಿಸಿ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಕೆಎಸ್ ಆರ್ ಟಿಸಿ ಅಧಿಕಾರಿಗಳು ಮೃತ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಬಳಿಕ ಗ್ರಾಮಸ್ಥರು ಪ್ರತಿಭನಟೆಯನ್ನು ಹಿಂಪಡೆದರು. ಈ ಬಗ್ಗೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ ಅಪಘಾತದಲ್ಲಿ ವಿದ್ಯಾರ್ಥಿ ಬಲಿ: ಬೆಳಗಾವಿ ಜಿಲ್ಲೆಯ ರಾಯಬಾಗ ಹೊರವಲಯದ ಗಡದ ಬಸ್ತಿ ಹತ್ತಿರ ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಮೃತ ವಿದ್ಯಾರ್ಥಿಯನ್ನು ಚಿಂಚಲಿ ಪಟ್ಟಣದ ನಿವಾಸಿ ವಿಶಾಲ ಮಾಯಪ್ಪಾ ವಡ್ಡರ (17) ಎಂದು ಗುರುತಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
2 bike riders killed after bike rams into KSRTC bus in Kodla village Sedam taluk Kalaburagi district on January 3. Deceased identified as Siddappa (17) and Ambaresh (23)

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ