ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಂಚೋಳಿ ಉಪ ಚುನಾವಣೆ : 2 ನಾಮಪತ್ರ ಸಲ್ಲಿಕೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 24 : ಚಿಂಚೋಳಿ ಪರಿಶಿಷ್ಟ ಜಾತಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 29 ಕೊನೆಯ ದಿನವಾಗಿದೆ.

ನಾಮತ್ರ ಸಲ್ಲಿಕೆಗೆ ಬುಧವಾರ 2ನೇ ದಿನವಾಗಿತ್ತು. ಒಟ್ಟಾರೆ ಇಬ್ಬರು ಅಭ್ಯರ್ಥಿಗಳು ಮೂರು ನಾಮಪತ್ರಗಳನ್ನು ಇದುವರೆಗೆ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಸೋಮಶೇಖರ ಅವರು ಹೇಳಿದ್ದಾರೆ.

ಚಿಂಚೋಳಿ, ಕುಂದಗೋಳ ಬಿಜೆಪಿ ಟಿಕೆಟ್‌ಗಾಗಿ ಬಾರಿ ಲಾಬಿಚಿಂಚೋಳಿ, ಕುಂದಗೋಳ ಬಿಜೆಪಿ ಟಿಕೆಟ್‌ಗಾಗಿ ಬಾರಿ ಲಾಬಿ

ಹಿಂದುಸ್ತಾನ ಜನತಾ ಪಾರ್ಟಿಯಿಂದ, ಬಹುಜನ ಸಮಾಜ ಪಾರ್ಟಿಯಿಂದ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ. ರಾಷ್ಟ್ರೀಯ ಪಕ್ಷದ ಯಾವುದೇ ಅಭ್ಯರ್ಥಿ ಇನ್ನೂ ನಾಮಪತ್ರವನ್ನು ಸಲ್ಲಿಕೆ ಮಾಡಿಲ್ಲ. ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಮತ್ತು ಬಿಜೆಪಿ ಇನ್ನೂ ಅಂತಿಮಗೊಳಿಸಿಲ್ಲ.

ಚಿಂಚೋಳಿ, ಕುಂದಗೋಳ ಉಪ ಚುನಾವಣೆಯತ್ತ ಎಲ್ಲರ ಚಿತ್ತಚಿಂಚೋಳಿ, ಕುಂದಗೋಳ ಉಪ ಚುನಾವಣೆಯತ್ತ ಎಲ್ಲರ ಚಿತ್ತ

by elections

'ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭೆ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಪಕ್ಷ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆ ವಿಶೇಷ ಪುಟ

ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 29 ಕೊನೆಯ ದಿನವಾಗಿದೆ. ಏಪ್ರಿಲ್ 30ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಮೇ 2 ಕೊನೆಯ ದಿನವಾಗಿದೆ. ಮೇ 19ರಂದು ಚುನಾವಣೆ ನಡೆಯಲಿದೆ.

English summary
Hindustan Janatha party and The Bahujan Samaj Party candidates field nomination for Chincholi assembly by election. April 29 last date to submit nomination, election will be held on May 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X