ಆ. 21 ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಸೂಚನೆ

ಕಲಬುರಗಿ, ಆಗಸ್ಟ್ 18: ಕರ್ನಾಟಕ ಸರ್ಕಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ಈ ವರ್ಷದ ಶೈಕ್ಷಣಿಕ ವರ್ಷದಲ್ಲಿ ಎರಡು ಬಾರಿ ಪೂರಕ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಆಗಸ್ಟ್ 21 ರಿಂದ 2ನೇ ಪೂರಕ ಪರೀಕ್ಷೆಗಳು ನಡೆಯಲಿದೆ, ಈಗಾಗಲೇ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

2nd PUC Supplementary Exam From August 21 Free Bus Travel For Student

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯುವ ದಿನಾಂಕ 21/8/2023 ರಿಂದ 2/9/2023ರ ತನಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ವಾಸಸ್ಥಳಗಳಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸುತ್ತೋಲೆಯ ಉಲ್ಲೇಖ; ಮುಖ್ಯ ಸಂಚಾರ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಹೊರಡಿಸಿದ ಸುತ್ತೋಲೆಯ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.

ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಈ ಕುರಿತು ನಿಗಮದ ಎಲ್ಲಾ ಚಾಲಕ/ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತಾ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಾನಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು. ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಾರ್ಯ ನಿರ್ವಹಣೆ ಮಾಡಬೇಕು ಎಂದು ನಿಗಮದ ವ್ಯಾಪ್ತಿಯ ಎಲ್ಲಾ ಘಟಕಗಳ ಹಾಗೂ ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಬೇಕು ಎಂದು ಸೂಚನೆ ನೀಡಲಾಗಿದೆ.

ಪರೀಕ್ಷೆ ವೇಳಾಪಟ್ಟಿ; ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡವರು, ಕಡಿಮೆ ಅಂಕ ಪಡೆದವರು ಎರಡು ಬಾರಿ ಪೂರಕ ಪರೀಕ್ಷೆ ಬರೆಯಲು ಕರ್ನಾಟಕ ಸರ್ಕಾರ ಅವಕಾಶ ನೀಡಿದೆ. ಇದಕ್ಕಾಗಿ 2ನೇ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.

ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹಾಗೂ ಮೇ 2023ರ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅನುತ್ತೀರ್ಣ ಅಂಕಪಟ್ಟಿ ಅರ್ಜಿಗಳನ್ನು ಮಂಡಲಿಯಿಂದ ನೀಡಲಾಗುವುದಿಲ್ಲ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ನೀಡಲಾಗುವ ಫಲಿತಾಂಶ ಪಟ್ಟಿಯ ಆಧಾರದ ಮೇಲೆ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡು ಪರೀಕ್ಷಾ ಶುಲ್ಕ ಸ್ವೀಕರಿಸಿ ಮಂಡಲಿಯ PU EXAM ಲಾಗಿನ್‌ನಲ್ಲಿ ವಿದ್ಯಾರ್ಥಿಯ ಮಾಹಿತಿಯನ್ನು ಭರ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

2023ನೇ ಸಾಲಿಗಿಂತ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಮೂಲ ಅನುತ್ತೀರ್ಣ ಅಂಕಪಟ್ಟಿ/ ಅರ್ಜಿ ಅಥವಾ ಹಿಂದಿನ ಎಂಸಿಎಗಳ ಆಧಾರದ ಮೇಲೆ ಪರೀಕ್ಷಾ ಶುಲ್ಕಗಳನ್ನು ಸ್ವೀಕರಿಸಿ ಮಂಡಲಿಯ PU EXAM ಲಾಗಿನ್‌ನಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡುವಂತೆ ನಿರ್ದೇಶನ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+