ಲಾಕ್‌ಡೌನ್ ಕರ್ತವ್ಯ ಲೋಪ: ಮೂವರು ಅಧಿಕಾರಿಗಳು ಮನೆಗೆ
ಕಲಬುರಗಿ, ಏಪ್ರಿಲ್ 24: ಲಾಕ್‌ಡೌನ್ ನಿಯಮಗಳನ್ನು ಅನುಷ್ಠಾನಗೊಳಿಸುವಲ್ಲಿ ಲೋಪ ಎಸಗಿರುವ ಆರೋಪದ ಮೇಲೆ ಕಲಬುರಗಿ ಜಿಲ್ಲೆಯಲ್ಲಿ ಒಬ್ಬ ಗ್ರಾಮ ಲೆಕ್ಕಾಧಿಕಾರಿ ಹಾಗೂ ಇಬ್ಬರು ಅಧಿಕಾರಿಗಳನ್ನು ಕಲಬುರಗಿ ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ.
ಜಿಲ್ಲಾಧಿಕಾರಿಯವರ ಆದೇಶವಿಲ್ಲದೇ ಕಲಬುರಗಿ ತಾಲೂಕಿನ ಸೆಕ್ಟ್ರೆಲ್ ಮೆಜಿಸ್ಟ್ರೇಟ್ ಎಂದು ಕರ್ತವ್ಯ ನಿರ್ವಹಿಸಿ ಅಧಿಕಾರ ದುರುಪಯೋಗ ಪಡಿಸಿಕೊಂಡ ಹಿನ್ನೆಲೆಯಲ್ಲಿ ಕಲಬುರಗಿ ಉಪವಿಭಾಗದ ಸಣ್ಣ ನೀರಾವರಿ ಇಲಾಖೆಯ ಕಿರಿಯ ಇಂಜಿನಿಯರ್ ಮಲ್ಲಿಕಾರ್ಜುನ ಮಾಲಿಪಾಟೀಲ ಎನ್ನುವರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯ 3ಲೋಪ ವೆಸಗಿರುವ ಹಿನ್ನೆಲೆಯಲ್ಲಿ ಕಲಬುರಗಿ ಉಪ ವಿಭಾಗದ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನರೇಂದ್ರ ಕುಮಾರ್ ಎನ್ನುವರನ್ನು ಅಮಾನತ ಮಾಡಲಾಗಿದೆ.

ಮೇಲಾಧಿಕಾರಿಗಳು ನೀಡಲಾದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸದೇ, ಸಾವಳಗಿ ಎಂಬ ಊರಿನಲ್ಲಿ ಜಾತ್ರೆ ನಡೆಸಲು ಬಿಟ್ಟಿದ್ದಕ್ಕೆ ಸಾವಳಗಿ ಗ್ರಾಮಲೆಕ್ಕಾಧಿಕಾರಿ ಜಗದೀಶರೆಡ್ಡಿ ಎನ್ನುವರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.
ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಈ ಆದೇಶ ಹೊರಡಿಸಿದ್ದಾರೆ. ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡದಂತೆ ತಡೆಯಲು ಸರ್ಕಾರ ಶ್ರಮಿಸುತ್ತಿದೆ. ಅಧಿಕಾರಿಗಳು, ಸಿಬ್ಬಂದಿ ನಿರ್ಲಕ್ಷ್ಯತನ ತೋರಿಸಿದರೆ ಸಹಿಸುವುದಿಲ್ಲ ಎಂಬ ಸಂದೇಶ ಈ ಮೂಲಕ ವ್ಯಕ್ತವಾಗಿದೆ.












Click it and Unblock the Notifications