ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿಯಲ್ಲಿ ಬಿಸಿಯೂಟ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ

|
Google Oneindia Kannada News

ಕಲಬುರಗಿ, ಫೆಬ್ರವರಿ 15: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿಯ ಸೇಡಂ ತಾಲೂಕಿನ ಶಿಲಾರಕೋಟ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ವಿದ್ಯಾರ್ಥಿಗಳು, ಸಂಜೆ ವೇಳೆಗೆ ವಾಂತಿ-ಬೇಧಿ ಮಾಡಿಕೊಳ್ಳ ಆರಂಭಿಸಿದ್ದರು.

ವಿದ್ಯಾರ್ಥಿಗಳು ವಾಂತಿ-ಬೇಧಿ ಮಾಡಿಕೊಳ್ಳೋದನ್ನು ನೋಡಿ ಗಾಬರಿಗೊಂಡ ಶಿಕ್ಷಕರು, ಪೋಷಕರು ತಕ್ಷಣ ಮುಧೋಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.

ಹುಳು ಬಿದ್ದ ಸಾಮಾಗ್ರಿಯೊಂದಿಗೆ ಅಡುಗೆ ಮಾಡುತ್ತಿದ್ದರೆಂಬ ಆರೋಪವೂ ಈ ಹಿಂದೆ ಕೇಳಿಬಂದಿತ್ತು. ಇದೀಗ ಬಿಸಿಯೂಟದಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳುವಂತಾಗಿದೆ.

ಘಟನಾ ಸ್ಥಳಕ್ಕೆ ಪಿಐ ತಿಮ್ಮರಾಯ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

ಬಿಸಿಯೂಟ ಯೋಜನೆಯ ಖಾಸಗೀಕರಣ ವಿರೋಧಿಸಿ ಬೆಂಗಳೂರಲ್ಲಿ ಪ್ರತಿಭಟನೆಬಿಸಿಯೂಟ ಯೋಜನೆಯ ಖಾಸಗೀಕರಣ ವಿರೋಧಿಸಿ ಬೆಂಗಳೂರಲ್ಲಿ ಪ್ರತಿಭಟನೆ

ಪ್ರಾಥಮಿಕ ಚಿಕಿತ್ಸೆ ನಂತರ ಸೇಡಂ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳ ದಾಖಲು ಮಾಡಲಾಗಿದೆ. ಈ ಪೈಕಿ 28 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಇಬ್ಬರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಅಡುಗೆ ಮಾಡುವವರ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

English summary
About 30 students fell ill after consuming mid-day meal in a state-run school in kalaburagi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X