ಕಲಬುರಗಿ; ಕೋವಿಡ್-19 ಪರೀಕ್ಷೆ, 35 ಜನರಿಗೆ ಕೊರೋನಾ ವೈರಸ್ ಇಲ್ಲ

ಕಲಬುರಗಿ, ಮಾರ್ಚ್ 27: ಕಲಬುರಗಿ ಜಿಲ್ಲೆಯಿಂದ ಇದೂವರೆಗೆ ಕೋವಿಡ್-19 ಪರೀಕ್ಷೆಗೆ ಮೃತ ವಯೋವೃದ್ಧ ವ್ಯಕ್ತಿ ಸೇರಿದಂತೆ ಒಟ್ಟಾರೆ 64 ಸ್ಯಾಂಪಲ್ಸ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ ಮಾರ್ಚ್ 26ರ ಸಾಯಂಕಾಲ 6 ಗಂಟೆ ವರೆಗೆ 35 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಟ್ಟಾರೆ 64 ಪ್ರಕರಣಗಳ ಪೈಕಿ ಇದೂವರೆಗೆ 3ರಲ್ಲಿ (ಮೃತ ವ್ಯಕ್ತಿ ಸೇರಿದಂತೆ) ಪಾಸಿಟಿವ್ ಬಂದಿದೆ. 2 ಪ್ರಕರಣಗಳಲ್ಲಿ ತಾಂತ್ರಿಕ ಕಾರಣದಿಂದ ಪರೀಕ್ಷೆಯಾಗಿರುವುದಿಲ್ಲ. ಇನ್ನೂ 24 ಪ್ರಕರಣಗಳಲ್ಲಿ ವೈದ್ಯಕೀಯ ಪರೀಕ್ಷೆಯ ವರದಿ ಬರಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾ ರೋಗಿಗಳು-LIve tracker

ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಹೊಂದಿದ ವ್ಯಕ್ತಿಗಳೊಂದಿಗೆ ನೇರ ಸಂಪರ್ಕ ಹೊಂದಿರುವ 99 ಜನ ಹಾಗೂ ಎರಡನೇ ಸಂಪರ್ಕ ಹೊಂದಿರುವ 388 ಜನರನ್ನು ಗುರುತಿಸಲಾಗಿದೆ.

35 Cases Negative In Coronavirus Said Kalaburagi DC

ಕೊರೊನಾದಿಂದ ಮೃತಪಟ್ಟ ತುಮಕೂರು ವೃದ್ಧನ ಟ್ರಾವೆಲ್ ಹಿಸ್ಟರಿ

ಇದಲ್ಲದೆ ವಿದೇಶದಿಂದ ಆಗಮಿಸಿದ 474 ಜನರನ್ನು ಸಹ ಪತ್ತೆ ಹಚ್ಚಲಾಗಿ ಒಟ್ಟಾರೆ ಇದೂವರೆಗೆ 961 ಜನರನ್ನು ಹೋಂ ಕ್ವಾರಂಟೈನ್‍ನಲ್ಲಿಟ್ಟು ಎಲ್ಲರ ಆರೋಗ್ಯದ ಮೇಲೆ ನಿಗಾ ವಹಿಸಿದೆ. ಇನ್ನೂ 22 ಜನರನ್ನು ಐಸೋಲೇಟೆಡ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿವರ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+