ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಸಾವು: ಜಿಲ್ಲಾಧಿಕಾರಿ ಸ್ಪಷ್ಟನೆ

|
Google Oneindia Kannada News

ಕಲಬುರಗಿ, ಮೇ 4: ಕಲಬುರಗಿ ಜಿಲ್ಲೆಯ ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ನಾಲ್ವರು ರೋಗಿಗಳ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು.

ಆಮ್ಲನಜಕ ಕೊರತೆಯಿಂದ ನಾಲ್ವರು ಸೋಂಕಿತರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ತುರ್ತು ಸುದ್ದಿಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದರು.

ಈಗಾಗಲೇ ಆಸ್ಪತ್ರೆ ವೈದ್ಯಾಧಿಕಾರಿ, ತಹಶೀಲ್ದಾರ ಹಾಗೂ ಎಸಿರನ್ನು ಸಂಪರ್ಕಿಸಲಾಗಿದೆ. ಸೋಮವಾರದಿಂದ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಂದು ತಿಳಿಸಿದರು.

Kalaburagi: 4 Covid-19 Patients Died In Afazalapura Taluk Hospital; DC Gives Clarification

ತಪ್ಪು ಮಾಹಿತಿಯಿಂದ ಮಾಧ್ಯಮಗಳಲ್ಲಿ ಆಕ್ಸಿಜನ್ ಕೊರತೆ ಎದುರಾಗಿದೆ ಅಂತಾ ಸುದ್ದಿ ಆಗಿದೆ. ಮೃತಪಟ್ಟ ರೋಗಿಗಳು ವಿವಿಧ ಕಾರಣಗಳಿಂದ ಮೃತಪಟ್ಟಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇದೆ ಎಂಬ ಸುದ್ದಿಯನ್ನು ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಅಲ್ಲಗೆಳೆದರು.

ಬೇರೆ ಬೇರೆ ಸಮಯದಲ್ಲಿ ರೋಗಿಗಳು ಮೃತಪಟ್ಟಿದ್ದಾರೆ, ಆಡಳಿತ ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿ ಯಾವುದೇ ವೈಫಲ್ಯ ಇಲ್ಲ ಎಂದು ತಿಳಿಸಿದರು.

ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಧಿಕಾರಿ
ಮಾಧ್ಯಮಗಳ ಜೊತೆ ನೇರ ಪ್ರಸಾರದಲ್ಲಿ ಆಕ್ಸಿಜನ್ ಖಾಲಿಯಾಗಿರುವ ಬಗ್ಗೆ ಅಫಜಲಪುರ ವೈದ್ಯಾಧಿಕಾರಿಗಳು ಒಪ್ಪಿಕೊಂಡಿದ್ದರು. ಆದರೆ ಜಿಲ್ಲಾಧಿಕಾರಿ ಹೇಳುವ ಪ್ರಕಾರ ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲ ಎಂದು ಹೇಳಲಾಗುತ್ತಿದೆ.

Recommended Video

IPL ಆಯ್ತು ಈಗ T20 ವರ್ಲ್ಡ್ ಕಪ್ ಸರದಿ | Oneindia Kannada

ಆಕ್ಸಿಜನ್ ಕೊರತೆ ಇಲ್ಲದಿದ್ದಲ್ಲಿ ಮಾಧ್ಯಮಗಳಲ್ಲಿ ವರದಿ ಪ್ರಸಾರದ ನಂತರ ತರಾತುರಿಯಲ್ಲಿ ಆಕ್ಸಿಜನ್ ಪೂರೈಕೆ ಯಾಕೆ ಮಾಡಲಾಗಿತ್ತು? ಎಂಬ ಮಾಧ್ಯಮಗಳ ಪ್ರಶ್ನೆಗೆ ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಗಲಿಬಿಲಿಯಿಂದ ಉತ್ತರ ನೀಡಿದರು.

ಸದ್ಯ ಅಫಜಲಪುರ ಆಸ್ಪತ್ರೆಯಲ್ಲಿ 8 ಜನ ಕೊವಿಡ್ ರೋಗಿಗಳಿದ್ದಾರೆ, ಅವರಲ್ಲಿ ನಾಲ್ವರು ರೋಗಿಗಳು ಆಕ್ಸಿಜನ್ ಮೇಲೆ ಇದ್ದಾರೆ. ಅಫಜಲಪುರ ತಾಲೂಕಾ ಆಸ್ಪತ್ರೆಯಲ್ಲಿ ಒಟ್ಟು 32 ಸೋಂಕಿತರಿಗೆ ಆಕ್ಸಿಜನ್ ನೀಡಲಾಗುತ್ತಿತ್ತು.

English summary
Kalaburagi DC VV Jyotsna held an emergency press conference to clarify the case where 4 Covid-19 Patients were died due to shortage of oxygen.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X