ಕೊರೊನಾ; ಕಲಬುರಗಿಯಿಂದ ಪರೀಕ್ಷೆಗೆ 4 ಮಾದರಿ ರವಾನೆ

ಕಲಬುರಗಿ, ಮಾರ್ಚ್ 16 : ಕಲಬುರಗಿ ಜಿಲ್ಲೆಯಲ್ಲಿ ಕೊರೊನಾದ ಭೀತಿ ಇನ್ನೂ ಕಡಿಮೆಯಾಗಿಲ್ಲ. ಹೊಸದಾಗಿ ನಾಲ್ವರು ಚಿಕಿತ್ಸೆ ದಾಖಲಾಗಿದ್ದು, ಅವರ ಗಂಟಲು ದ್ರವ್ಯದ ಮಾದರಿಗಳನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ.

ಸೋಮವಾರ ವಾರ್ತಾ ಭವನದಲ್ಲಿ ಜಿಲ್ಲಾಧಿಕಾರಿ ಶರತ್ ಬಿ. ಪತ್ರಿಕಾಗೋಷ್ಠಿ ನಡೆಸಿದರು. "ಕಲಬುರಗಿಯ ಮೃತ ವ್ಯಕ್ತಿಯ ಸಂಪರ್ಕ ಹೊಂದಿದ್ದ ಇಬ್ಬರು ವ್ಯಕ್ತಿಗಳು ಹಾಗೂ ವಿದೇಶದಿಂದ ಬಂದ ಇಬ್ಬರು ವ್ಯಕ್ತಿಗಳ ಗಂಟಲು ದ್ರವ್ಯದ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ" ಎಂದರು.

ಕಲಬುರಗಿ ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನಲ್ಲಿ ಈ ಹಿಂದಿನ ಮೂರು ನೆಗೆಟಿವ್, ಒಂದು ಪಾಸಿಟಿವ್ ರೋಗಿ ಹಾಗೂ ಹೊಸದಾಗಿ ಕೊರೊನಾ ವೈರಸ್ ಲಕ್ಷಣದ ಹಿನ್ನೆಲೆಯಲ್ಲಿ ದಾಖಲಾದ 4 ರೋಗಿಗಳು ಸೇರಿದಂತೆ ಒಟ್ಟು 8 ಜನರಿಗೆ ಪ್ರತ್ಯೇಕ ಐಸೋಲೇಷನ್ಸ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

kalaburagi dc

"ಮೃತ ವ್ಯಕ್ತಿಯ ಸಂಬಂಧಿಕರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಈ ಹಿಂದೆ ಗುರುತಿಸಿದ 71 ವ್ಯಕ್ತಿಗಳ ಜೊತೆಗೆ ಎರಡನೇ ವ್ಯಕ್ತಿಯ ಜೊತೆ ಸಂಪರ್ಕ ಹೊಂದಿದ 238 ವ್ಯಕ್ತಿಗಳನ್ನು ಹಾಗೂ ವಿದೇಶದಿಂದ ಮರಳಿದ 61 ವ್ಯಕ್ತಿಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 370 ಜನರ ಮೇಲೆ ನಿಗಾ ವಹಿಸಲಾಗಿದೆ" ಎಂದು ಜಿಲ್ಲಾಧಿಕಾರಿಗಳು ಹೇಳಿದರು.

"ಜಿಮ್ಸ್ ಆಸ್ಪತ್ರೆಯಲ್ಲಿ 12 ಮತ್ತು ಇ.ಎಸ್.ಐ.ಸಿ.ನಲ್ಲಿ 50 ಐಸೋಲೇಷನ್ ವಾರ್ಡ್‍ಗಳಿವೆ. ಇದರ ಜೊತೆಯಲ್ಲಿ 200 ಕ್ವಾರಂಟೈನ್ ವಾರ್ಡ್ ಸಹ ಇದ್ದು, ಇಲ್ಲಿ ರೋಗಿಗಳಿಗೆ ಹೋಂ ಕ್ವಾರಂಟೈನ್‍ನಲ್ಲಿಟ್ಟು ತೀವ್ರ ನಿಗಾ ವಹಿಸುವ ಎಲ್ಲಾ ಸೌಲಭ್ಯವಿದೆ" ಎಂದು ಮಾಹಿತಿ ನೀಡಿದರು.

ಕೊರೊನಾ ವೈರಸ್ ಸೋಂಕಿನಿಂದ ಕಲಬುರಗಿ ವ್ಯಕ್ತಿ ನಿಧನ ಹೊಂದಿದ್ದರಿಂದ ಮತ್ತು ಈಗಾಗಲೇ ರಾಜ್ಯದಾದ್ಯಂತ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಆಗಿರುವುದರಿಂದ ಪ್ರಸ್ತುತ ಒಂದು ವಾರಗಳ ಕಾಲ ಜಿಲ್ಲೆಯಾದ್ಯಂತ ಅಘೋಷಿತ ಬಂದ್ ಜಾರಿಯಲ್ಲಿದೆ.

"ಇದು ಮುಂದಿನ ಒಂದು ತಿಂಗಳವರೆಗೆ ಮುಂದುವರೆಯುವ ಸಾಧ್ಯತೆ ಇದ್ದು, ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು" ಎಂದು ಶರತ್ ಬಿ. ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+