ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿ ಸಮ್ಮೇಳನದಲ್ಲಿ ಪಾಲ್ಗೊಂಡ ಸಾಹಿತ್ಯಾಸಕ್ತರು ಎಷ್ಟು?

|
Google Oneindia Kannada News

ಕಲಬುರಗಿ, ಫೆಬ್ರವರಿ 8: ಮೂರು ದಿನಗಳವರೆಗೆ ಶರಣರ ನಾಡು ಕಲಬುರಗಿಯಲ್ಲಿ ನಡೆದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯವಾಗಿದೆ.

ಒಟ್ಟಾರೆ ಮೂರು ದಿನ ನಡೆದ ಈ ಕನ್ನಡ ನುಡಿ ಜಾತ್ರೆಯಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿದ್ದು ಕಂಡು ಬಂದಿತು. ಮೂರು ಲಕ್ಷ ಜನ ಸಾಹಿತ್ಯ ಸಮ್ಮೇಳನದಲ್ಲಿ ಭೋಜನ ಸವಿದರು.

85 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಕಳೆಗಟ್ಟಿದ ಕಲಬುರಗಿ85 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಕಳೆಗಟ್ಟಿದ ಕಲಬುರಗಿ

'ನಾವು ನಿರೀಕ್ಷಿಸಿದ್ದಕ್ಕಿಂತಲೂ ಸಮ್ಮೇಳನ ಯಶಸ್ವಿಯಾಗಿ ನಡೆದಿದೆ. ಇಲ್ಲಿನ ಜನ ಸಾಹಿತ್ಯ ಪ್ರೇಮಿಗಳು ಎಂದು ನಿರೂಪಿಸಿದ್ದಾರೆ. ಜನಪ್ರತಿನಿಧಿಗಳು, ಸಾಹಿತಿಗಳು, ವಿವಿಧ ಸಂಘ ಸಂಸ್ಥೆಗಳ ಸಹಕಾರವೂ ಸಕಾಲಕ್ಕೆ ಸಿಕ್ಕಿದ್ದರಿಂದ ಸಮ್ಮೇಳನ ಯಶಸ್ವಿಯಾಗಿ ನಡೆಸಲು ಸಾಧ್ಯವಾಯಿತು' ಎಂದು ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿಯೂ ಆದ ಜಿಲ್ಲಾಧಿಕಾರಿ ಶರತ್ ಬಿ ಹೇಳಿದ್ದಾರೆ.

85th Akhila Bharath Kannada Sahitya Sammelana Ends Successfully

ಕಲಬುರಗಿಯಲ್ಲಿ ನಾಲ್ಕನೇ ಬಾರಿಗೆ ನಡೆದ ಸಾಹಿತ್ಯ ಸಮ್ಮೇಳನಕ್ಕೆ ಕೊನೆ ದಿನ ಭಾರೀ ಸಂಖ್ಯೆಯ ಜನ ಹರಿದು ಬಂದರು ಎಂದು ಹೇಳಲಾಗಿದೆ. ಬಿಸಿಲಿನಲ್ಲೂ ಜನ ಸಾಹಿತ್ಯ ಜಾತ್ರೆಯಲ್ಲಿ ಪಾಲ್ಗೊಂಡು ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದರು.

English summary
85th Akhila Bharath Kannada Sahitya Sammelana Ends Successfully On Friday In Kalaburagi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X