ಕಲಬುರಗಿಯಲ್ಲಿ ನಾಳೆಯಿಂದ 85 ನೇ ಅಕ್ಷರ ಜಾತ್ರೆ
ಕಲಬುರಗಿ, ಫೆಬ್ರವರಿ 04: ನೃಪತುಂಗನ ನಾಡು ಕಲಬುರಗಿಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ನಡೆತುವ 85 ನೇ ಅಕ್ಷರ ಜಾತ್ರೆಗೆ ಚಾಲನೆ ಸಿಗಲಿದೆ.
ಈ ಭಾಗದ ಸಾಹಿತ್ಯಾಸಕ್ತರಿಗೆ ಮತ್ತು ಕನ್ನಡ ಮನಸ್ಸುಗಳಿಗೆ ಮೂರು ದಶಕಗಳ ನಂತರ ಮತ್ತೊಮ್ಮೆ ಕನ್ನಡ ತೇರು ಎಲೆಯುವ ಸೌಭಾಗ್ಯ ಒಲಿದು ಬಂದಿದೆ. ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಫೆ. 5, 6 ಮತ್ತು 7 ರಂದು 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ನೃಪತುಗನ ಕವಿರಾಜಮಾರ್ಗದ ತೊಟ್ಟಿಲು, ತೊಗರಿ ಕಣಜವೆಂದೇ ದೇಶದಲ್ಲಿ ಹೆಸರುವಾಸಿಯಾಗಿರುವ ಈ ನಾಡಲ್ಲಿ ಕನ್ನಡಾಂಬೆಯ ಉತ್ಸವ ಜರುಗಲಿದೆ.

ಶರಣರು, ಸೂಫಿ ಸಂತರು, ನಡೆದಾಡಿದ ನೆಲ, ಸಾವಿರಾರು ವರ್ಷದ ಇತಿಹಾಸ ಹೊಂದಿದ ಈ ಜಿಲ್ಲೆಯಲ್ಲಿ ಹಲವು ಪುರಾತನ ಕುರುಹುಗಳಿವೆ. ಹಲವು ಶಿಲ್ಪ ಕೆತ್ತನೆಗಳನ್ನು ಹೊಂದಿದೆ. ಕಾಳಗಿಯಲ್ಲಿರುವ ಕಲ್ಲಿನ ಮೂರ್ತಿಗಳು, ರಾಷ್ಟ್ರಕೂಟರ ರಾಜಧಾನಿಯಾದ ಮಳಖೇಡದ ಕೋಟೆಗಳು, ಚಿಂಚೋಳಿ ವನ್ಯಧಾಮ, ಅಮರ್ಜಾ ಜಲಾಶಯದಂತಹ ಐತಿಹಾಸಿಕ ಸ್ಥಳಗಳ ಬೀಡು ಈ ಕಲಬುರಗಿ.
ಜಿಲ್ಲಾ ಕೇಂದ್ರದಲ್ಲಿ ಶರಣಬಸವೇಶ್ವರರ ದೇವಸ್ಥಾನ, ಸರ್ವ-ಧರ್ಮಗಳ ಸಂಕೇತವಾದ ಖಾಜಾ ಬಂದಾ ನವಾಜ್ ದರ್ಗಾ, ಬುದ್ಧನ ಸಂದೇಶ ಹೇಳುವ ಬೌದ್ಧ ವಿಹಾರ ಎಲ್ಲವೂ ಕಲಬುರಗಿಗೆ ಮುಕುಟ ಮಣಿಯಂತೆ ಕಾಣುತ್ತವೆ.

ಸಾಹಿತ್ಯ ಪ್ರೇಮಿಗಳ ಕನಸು ನನಸು ಮಾಡಲು ಮೂರು ದಶಕಗಳ ನಂತರ ಮತ್ತೆ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಹಿಸುವ ಅವಕಾಶ ಬಂದಿರುವುದು ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ.
ಕವಿಶ್ರೇಷ್ಠ ಎಚ್.ಎಸ್.ವೆಂಕಟೇಶ ಮೂರ್ತಿಯವರು ಅಧ್ಯಕ್ಷರಾಗಿರುವ 85 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯಿಂದ ಅಷ್ಟೇ ಅಲ್ಲದೇ ಹೊರರಾಜ್ಯ, ದೇಶ-ವಿದೇಶಗಳಿಂದ ಸಾಹಿತ್ಯಾಸಕ್ತರು ಆಗಮಿಸುತ್ತಿದ್ದಾರೆ.
ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದ 35 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ಸಜ್ಜಾಗಿದ್ದು, ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ 10 ಗೋಷ್ಠಿ ಹಾಗೂ ಸಮಾನಂತರ ವೇದಿಕೆಯಲ್ಲಿ 12 ಗೋಷ್ಠಿಗಳು ನಡೆಯಲಿವೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications