ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ

ಕಲಬುರಗಿ, ಫೆಬ್ರವರಿ 6; 86 ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ ಗುರುವಾರ ಸಂಜೆ ಕಲಬುರಗಿಯಲ್ಲಿ ಪ್ರಕಟಿಸಿದರು.

ಅವರು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಫೆ 6ರ ಸಂಜೆ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯ ನಂತರ ಮಾತನಾಡಿದರು.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯಲ್ಲಿ ಮುಂದಿನ ಸಮ್ಮೇಳನ ಆಯೋಜಿಸುವ ಕುರಿತು ಚರ್ಚೆ ನಡೆಯಿತು ಎಂದು ಡಾ. ಮನು ಬಳಿಗಾರ ಅವರು ತಿಳಿಸಿದರು.

86th Akhila Bharath Kannada Sahitya Sammelana Will Be Held In Haveri

ಕಳೆದ ನಾಲ್ಕು ವರ್ಷಗಳ ಹಿಂದೆಯೇ ಹಾವೇರಿಯಲ್ಲಿ ಈ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಸ್ಥಳ ಹಾವೇರಿಯೋ ? ರಾಣೆಬೆನ್ನೂರೋ ಎಂಬುದು ಸ್ಪಷ್ಟವಾಗಿ ನಿರ್ಧಾರವಾಗದ ಹಿನ್ನೆಲೆಯಲ್ಲಿ ವಿವಾದವಾಗಿತ್ತು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯುತ್ತಿರುವುದು ಇದು ಮೊದಲ ಬಾರಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+