Earthquake in Kalaburagi : ಕಲಬುರಗಿಯಲ್ಲಿ 3.4 ತೀವ್ರತೆಯ ಭೂಕಂಪ

ಕಲಬುರಗಿ, ಜನವರಿ 18: ಬುಧವಾರ ಬೆಳಗ್ಗೆ ಕಲಬುರಗಿಯಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಇಂದು ಬೆಳಗ್ಗೆ 9.48ಕ್ಕೆ 5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಬೆಳಗ್ಗೆ 09.48 ಸಮಯದಲ್ಲಿ ಭೂಕಂಪನ ತೀವ್ರತೆ 3.4, 18-01-2023 ರಂದು ಸಂಭವಿಸಿದೆ. ಲ್ಯಾಟ್ 17.06 ಮತ್ತು ಉದ್ದ 77.18, ಆಳ 5 ಕಿಮೀ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಟ್ವೀಟ್ ಮಾಡಿದೆ.

ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಬರಲಿದ್ದು, ಇದರ ಮುನ್ನವೇ ನೈಸರ್ಗಿಕ ವಿಕೋಪ ಸಂಭವಿಸಿದೆ. ಜನವರಿ 19ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಳ್ಳಲಿದ್ದಾರೆ. ಅಲ್ಲಿಂದ ಯಾದಗಿರಿ ಜಿಲ್ಲೆ ಹುಣಸಗಿ ತಲೂಕು ಕೊಡೆಕಲ್‌ ಹೆಲಿಪ್ಯಾಡ್‌ಗೆ ತಲುಪಲಿದ್ದಾರೆ.

A 3.4 magnitude earthquake in Kalaburagi

ಬೆಳಗ್ಗೆ 12ಕ್ಕೆ ಪ್ರಧಾನಿ ಮೋದಿ ಅವರು ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧೂನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ 1 ಗಂಟೆಗೆ ಜಲ್‌ ಜೀವನ್‌ ಮಿಷನ್‌ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸರತ್‌ ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌ 3ನೇ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಅಲ್ಲಿಂದ 1.10ಕ್ಕೆ ಕೊಡೆಕಲ್‌ ಹೆಲಿಪ್ಯಾಡ್‌ಗೆ ರಸ್ತೆ ಮೂಲಕ ಹೊರಡು ಹೆಲಿಪ್ಯಾಡ್‌ ಮೂಲಕ ಕಲಬುರಗಿ ಜಿಲ್ಲೆ ಸೇಡಂ ತಾಲೂಕು ಮಳಖೇಡ ಹೆಲಿಪ್ಯಾಡ್‌ಗೆ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಸಾಗಿ ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಹಾಗೂ ವಿವಿಧ ಕಾರ್ಯಕ್ರಮಗಳ ಶಿಲನ್ಯಾಸ ಮಾಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+